ಮನ್ ಕಿ ಬಾತ್ ಆಲಿಸಿದ ಬಿಜೆಪಿ ನಾಯಕರು
ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ತೆಲುಗು ವಿಜ್ಞಾನ ಸಮಿತಿಯ ಶ್ರೀಕೃಷ್ಣ ದೇವರಾಯ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕೀ ಬಾತ್‌ ಕಾರ್ಯಕ್ರಮವನ್ನ
Mankibath


ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ತೆಲುಗು ವಿಜ್ಞಾನ ಸಮಿತಿಯ ಶ್ರೀಕೃಷ್ಣ ದೇವರಾಯ ಸಭಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕೀ ಬಾತ್‌ ಕಾರ್ಯಕ್ರಮವನ್ನು ವೀಕ್ಷಿಸಿದರು.

ಬಳಿಕ ಪ್ರತಿ ಮನೆಯೂ ಆತ್ಮನಿರ್ಭರ ಭಾರತಕ್ಕಾಗಿ ಪ್ರತಿ ಮನೆಯೂ ಸ್ವದೇಶಿ - ಮನೆ ಮನೆಯೂ ಸ್ವದೇಶಿ ಎಂಬ ನಿಟ್ಟಿನಲ್ಲಿ ಸ್ವದೇಶಿ ಮಂತ್ರವನ್ನು ಅಳವಡಿಸಿಕೊಳ್ಳುವುದಾಗಿ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್.‌ ಅಶ್ವತ್ಥ್‌ ನಾರಾಯಣ್‌, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನ ಪರಿಷತ್‌ ಸದಸ್ಯರಾದ ಕೇಶವ್‌ ಪ್ರಸಾದ್‌, ಶ್ರೀಮತಿ ಭಾರತಿ ಶೆಟ್ಟಿ, ಮಾಜಿ ಶಾಸಕರಾದ ನೆ. ಲ. ನರೇಂದ್ರ ಬಾಬು, ಮಾಜಿ ಪರಿಷತ್‌ ಸದಸ್ಯರಾದ ವೈ. ಎ. ನಾರಾಯಣಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯರಾದ ಶ್ರೀಮತಿ ತಾರಾ ಅನುರಾಧ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande