ನವದೆಹಲಿ, 28 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಲೋಕ ಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಭಗತ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಭಗತ್ ಸಿಂಗ್ ಅವರ ತ್ಯಾಗ, ಧೈರ್ಯ ಮತ್ತು ಮಾತೃ ಭೂಮಿ ರಕ್ಷಣೆಗೆ ನೀಡಿದ ಸೇವೆಯನ್ನು ಸ್ಮರಿಸಿದರು. ಭಗತ್ ಸಿಂಗ್ ಅವರ ಅಚಲ ಸಂಕಲ್ಪ ಮತ್ತು ತ್ಯಾಗ ಯಾವಾಗಲೂ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯ ಮೂಲವಾಗಿರುತ್ತದೆ ಎಂದು ರಾಹುಲ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa