ಕೋಲಾರ, ೨೮ ಸೆಪ್ಟೆಂಬರ್ (ಹಿ.ಸ) :
ಆ್ಯಂಕರ್ : ಗ್ರಾಮೀಣ ಪ್ರದೇಶದ ಯುವ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹವಿಲ್ಲದೇ ಅವಕಾಶ ವಂಚಿತರಾಗುತ್ತಿದ್ದಾರೆ ಅಂತಹವರಿಗೆ ಇಂತಹ ಕ್ರೀಡಾಕೂಟಗಳಿಂದ ಪ್ರತಿಭೆ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ಮೂರಾಂಡಹಳ್ಳಿ ಗ್ರಾಮದಲ್ಲಿ ಭಾನುವಾರ ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಮಾತೃಶ್ರೀ ಎಂಟರ್ ಪ್ರೈಸಸ್ ವತಿಯಿಂದ ನಡೆದ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ಹಿರಿಯರು ನಮಗಾಗಿ ಬಿಟ್ಟು ಹೋದ ದೇಸಿಯ ಕ್ರೀಡೆಗಳಾದ ಕಬಡ್ಡಿ, ಖೋಖೋ, ಕುಸ್ತಿ ಮುಂತಾದ ಗ್ರಾಮೀಣ ಕ್ರೀಡೆಗಳು ಕ್ರಮೇಣ ನಶಿಸಿ ಹೋಗುತ್ತಿದ್ದು, ಇಂದಿನ ಪೀಳಿಗೆ ಇವುಗಳನ್ನು ಉಳಿಸಿ ಬೆಳೆಸುವತ್ತ ಚಿಂತನೆ ನಡೆಸಬೇಕು ಎಂದರು.
ಇ0ದಿನ ಯುವ ಜನತೆ ದಿನನಿತ್ಯದ ಜೀವನದಲ್ಲಿ ಅನೇಕ ಮಾರಣಾಂತಿಕ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ದೈಹಿಕ ಆರೋಗ್ಯದ ಕಡೆ ಗಮನಹರಿಸುತ್ತಿಲ್ಲ ಉತ್ತಮ ಆರೋಗ್ಯವೇ ನಮ್ಮ ಜೀವನದ ಬಹುದೊಡ್ಡ ಆಸ್ತಿ, ದುಶ್ಚಟ ತೊರೆದು ಆರೋಗ್ಯ ಕಾಪಾಡಿಕೊಳ್ಳಬೇಕು ಉತ್ತಮ ಆರೋಗ್ಯ ಹೊಂದಲು ಪ್ರತಿದಿನ ಕ್ರೀಡೆ ಯೋಗದ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನರೇಶ್ ಯಾದವ್, ನದೀಂ. ಆಯೋಜಕರಾದ ರಘು, ನಾಗರಾಜ್, ಹರಿ , ಮಹೇಂದ್ರ, ಮುಂತಾದವರು ಇದ್ದರು.
ಚಿತ್ರ : ಕೋಲಾರ ಹೊರ ವಲಯದ ಮೂರಂಡಹಳ್ಳಿ ಗ್ರಾಮದಲ್ಲಿ ನಡೆದ ಕ್ರಿಕೆಟ್ ಟೂರ್ನಿಮೆಂಟ್‌ನಲ್ಲಿ ಕ್ರೀಡಾಪಟುಗಳನ್ನು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅಭಿನಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್