ತಮಿಳುನಾಡು ಕಾಲ್ತುಳಿತ ದುರಂತಕ್ಕೆ ಡಿಎಂಕೆ ಸರಕಾರ ಹೊಣೆ : ಆರ್.ಅಶೋಕ
ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿದ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆತಂಕ ವ್ಯಕ್ತಪಡಿಸಿದ್ದು ದುರಂತಕ್ಕೆ ಡಿಎಂಕೆ ಸರಕಾರ ಹೊಣೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತ
Ashok


ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿದ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆತಂಕ ವ್ಯಕ್ತಪಡಿಸಿದ್ದು ದುರಂತಕ್ಕೆ ಡಿಎಂಕೆ ಸರಕಾರ ಹೊಣೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಥ ಘಟನೆ ದೇಶದ ಬೇರೆ ಎಲ್ಲೂ ಆಗಿಲ್ಲ. ದುರ್ಘಟನೆಯಲ್ಲಿ ಚಿಕ್ಕ ಮಕ್ಕಳೂ ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದಿದ್ದಾರೆ.ಕರೂರು ದುರಂತ ಸಾರ್ವಜನಿಕರಿಗೆ ದೊಡ್ಡ ದಿಗ್ಭ್ರಾಂತಿ ತಂದಿದೆ. ಡಿಎಂಕೆ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಂಡು ವಿಜಯ್ ತಲೆಗೆ ಪ್ರಕರಣ ಕಟ್ಟುತ್ತಿದೆ ಎಂದಿದ್ದಾರೆ.

ಅವರು ಸ್ಥಳ ಕೇಳರುವುದು ಎಲ್ಲಿ ಅಲ್ಲಿನ ಸರ್ಕಾರ ಅನುಮತಿ ನೀಡಿರುವುದು ಎಲ್ಲಿ ಎಂದು ಪ್ರಶ್ನಿಸಿದ್ದಾರೆ. ವಿಜಯ್ ಬಂದು ರ‍್ಯಾಲಿ ಮಾಡಿ ಹೋದರು, ಅವರದ್ದೂ ತಪ್ಪಿದೆ. ವಿಜಯ್ ಕ್ಷಮೆ ಕೇಳಿಲ್ಲ, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪಾತ್ರವೇ ದೊಡ್ಡದು, ದುರಂತಕ್ಕೆ ರಾಜ್ಯ ಸರ್ಕಾರ ಕಾರಣ. ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ಕೊಟ್ಟಿದೆ. ಕಾನೂನು ಸುವ್ಯವಸ್ಥೆ ಕಾಪಾಡಿಲ್ಲ. ಜನರ ಸಾವಿಗೆ ನೇರ ಕಾರಣ ಡಿಎಂಕೆ ಸರ್ಕಾರ. ಈ ದುರಂತ ಪ್ರಕರಣವನ್ನು ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande