ಮೈಸೂರಿನಲ್ಲಿ ಆಕರ್ಷಕ ವೈಮಾನಿಕ ಪ್ರದರ್ಶನ
ಮೈಸೂರು, 28 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಜಿಲ್ಲಾಡಳಿತ ಮತ್ತು‌ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಇಂದು ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಭಾರತೀಯ ವಾಯುಪಡೆ ಆಕರ್ಷಕ ವೈಮಾನಿಕ ಪ್ರದರ್ಶನ ನಡೆಸಿತು. ಡಾಲ್ಫಿನ್
Air show


ಮೈಸೂರು, 28 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಜಿಲ್ಲಾಡಳಿತ ಮತ್ತು‌ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಇಂದು ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಭಾರತೀಯ ವಾಯುಪಡೆ ಆಕರ್ಷಕ ವೈಮಾನಿಕ ಪ್ರದರ್ಶನ ನಡೆಸಿತು.

ಡಾಲ್ಫಿನ್ ಸ್ಲೀಪ್, ಸಾರಂಗ್ ಸ್ಪ್ಲೀಟ್, ಹಾರ್ಟ್ ಫಾರ್ಮೇಷನ್, ಡಿವೈನ್ ಗ್ಲಾಸ್, ಡಬಲ್ ಏರೋ ಕ್ರಾಸ್ ಸೇರಿದಂತೆ ಒಟ್ಟು 16 ರೀತಿಯ ಮಾದರಿಗಳನ್ನು ಪ್ರದರ್ಶಿಸಲಾಯಿತು. ವಾಯುಪಡೆಯ 70 ಸಿಬ್ಬಂದಿ ಪಾಲ್ಗೊಂಡಿದ್ದರು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಮಂದಿ ಶರವೇಗದಲ್ಲಿ ವಿಮಾನಗಳ ಹಾರಾಟ ಕಂಡು ಪುಳಕಿತರಾದರು.

ಸಮಾಜ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನೆ‌ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಡಿ.ರವಿಶಂಕರ್, ವಿಧಾನ ಪರಿಷತ್‌ ಸದಸ್ಯರಾದ ವಿವೇಕಾನಂದ, ಕೆ.ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಇನ್ನಿತರ ಗಣ್ಯರು ಪ್ರದೇಶದ ವೇಳೆ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande