ವಿಜಯಪುರ, 28 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ವಿಜಯಪುರ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಬಿ.ಎಲ್.ಡಿ.ಇ. ಸಂಸ್ಥೆಯ ವಚನ ಪಿತಾಮಹ ಡಾ. ಫ.ಗು.ಹಳಕಟ್ಟಿ ಕಾಲೇಜ್ ಆಫ್ ಇಂಜಿನಿಯರಿಂಗ್ ಹಾಗೂ ಟೆಕ್ನಾಲಜಿ ವಿಜಯಪುರ ಇವರ ಸಹಯೋಗದಲ್ಲಿ “ಎಂ.ಎಸ್. ಎಂ.ಇ. ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು” (ಖಂಒP) ಯೋಜನೆಯಡಿ ಇನ್ಕ್ಯುಬೇಷನ್ ಕುರಿತು ಒಂದು ದಿನದ ಕಾರ್ಯಗಾರವನ್ನು ನಾಳೆ 29ರ ಬೆಳಿಗ್ಗೆ 10.00 ಗಂಟೆಗೆ ಬಿ.ಎಲ್.ಡಿ.ಇ. ಸಂಸ್ಥೆಯ ವಚನ ಪಿತಾಮಹ ಡಾ. ಫ.ಗು.ಹಳಕಟ್ಟಿ ಕಾಲೇಜ್ ಆಫ್ ಇಂಜಿನಿಯರಿಂಗ್ ಹಾಗೂ ಟೆಕ್ನಾಲಜಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಬಿಎಲ್‍ಡಿಇಎಸಿಇಟಿಯ ಪ್ರಾಚಾರ್ಯರಾದ ಡಾ.ಮಂಜುನಾಥ ಪಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಕೆಎಸ್‍ಎಫ್‍ಸಿ ಶಾಖಾ ವ್ಯವಸ್ಥಾಪಕರಾದ ಆರ್.ಶ್ರೀಪಾದ, ಅಗ್ರಣೀಯ ಬ್ಯಾಂಕ್ ಮ್ಯಾನೇಜರ್ ಸಿದ್ದಯ ಬಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಜಿ.ಎಸ್.ದೇಸಾಯಿ, ಸಿಡಾಕ್ ಜಂಟಿ ನಿರ್ದೇಶಕರಾದ ಸುಪ್ರೀತಾ ಬಳ್ಳಾರಿ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande