ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಜೆ.ಪಿ. ನಗರ 1ನೇ ಹಂತದಲ್ಲಿರುವ ಎಸ್‌ಬಿಐ ಕಾಲೋನಿಯಲ್ಲಿ ಪೈಪ್‌ಲೈನ್ ಅನಿಲ ಕಾಮಗಾರಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಚಾಲನೆ ನೀಡಿದರು.
ನಗರದ ಮನೆಗಳಿಗೆ ಸ್ವಚ್ಛ, ಸುರಕ್ಷಿತ ಮತ್ತು ಕಡಿಮೆ ವೆಚ್ಚ-ಪರಿಣಾಮಕಾರಿ ಶಕ್ತಿಯನ್ನು ಒದಗಿಸುವ ದಿಕ್ಕಿನಲ್ಲಿ ಈ ಯೋಜನೆಯು ಒಂದು ಮಹತ್ವದ ಹೆಜ್ಜೆಯಾಗಿದೆ. ಈ ಸಂದರ್ಭದಲ್ಲಿ ಪಿಎನ್‌ಜಿಯ ಆರ್ಥಿಕ ಪ್ರಯೋಜನಗಳನ್ನು ವಿವರಿಸಿದ ಸಂಸದ ಸೂರ್ಯ ಅವರು, ಕುಟುಂಬಗಳು ಪ್ರತಿ ಸಿಲಿಂಡರ್ ಮೇಲೆ ಸರಾಸರಿ 200 ರಿಂದ 300 ರೂ. ಉಳಿತಾಯವನ್ನು ಮಾಡಬಹುದಾಗಿದೆ ಎಂದು ತಿಳಿಸಿದರು.
ಪಿಎನ್‌ಜಿ ಸಾಂಪ್ರದಾಯಿಕ ಎಲ್‌ಪಿಜಿಗಿಂತ ಹೆಚ್ಚು ಸುರಕ್ಷಿತ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರವು ಬೆಂಗಳೂರಿನಲ್ಲಿ ಶೇ.100 ರಷ್ಟು ಪಿಎನ್‌ಜಿ ವ್ಯಾಪ್ತಿಯನ್ನು ಒದಗಿಸಲು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa