ರಾಯಚೂರು, 28 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ರಾಯಚೂರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಸಿಂಧನೂರ ತಾಲೂಕಿನಲ್ಲಿ ಆರೋಗ್ಯ ಇಲಾಖೆ, ಕರ್ನಾಟಕ ಗೃಹಮಂಡಳಿ, ಕೆಆರ್‍ಐ ಡಿಎಲ್ ಸೇರಿದಂತೆ ಇಲಾಖೆಗಳ ಕಟ್ಟಡಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.
15 ಕೋಟಿ ರೂ. ವೆಚ್ಚದಲ್ಲಿ ಸಿಂಧನೂರು ನಗರದ ಪಿ.ಡಬ್ಲ್ಯೂಡಿ ಕ್ಯಾಂಪಿನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮತ್ತು 1.5 ಕೋಟಿ ರೂ.ವೆಚ್ಚದಲ್ಲಿ ಸಿಂಧನೂರು ನಗರದಲ್ಲಿ ನೂತನ ತಾಲೂಕು ಪಂಚಾಯತ್ ಕಾರ್ಯಾಲಯಕ್ಕೆ ಲೋಕಾರ್ಪಣೆ ಮಾಡಲಾಯಿತು.
6 ಕೋಟಿ ರೂ ವೆಚ್ಚದಲ್ಲಿ ಸಿಂಧನೂರು ನಗರದಲ್ಲಿ ಜಿಟಿಟಿಸಿ ಕಟ್ಟಡ ನಿರ್ಮಾಣ ಕಾಮಗಾರಿಗೆ, 1.48 ಕೋಟಿ ರೂ ವೆಚ್ಚದಲ್ಲಿ ತರಬೇತಿ ಕೇಂದ್ರ ಮತ್ತು ಕಲ್ಚರಲ್ ಹಾಲಗೆ ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕೆ, 1.46 ಕೋಟಿ ರೂ ವೆಚ್ಚದಲ್ಲಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜ್ ಕಟ್ಟಡ ನಿರ್ಮಾಣಕ್ಕೆ, 20 ಕೋಟಿ ರೂ ವೆಚ್ಚದಲ್ಲಿ ಸರ್ಕಾರಿ ಪದವಿ ಮಹಾವಿದ್ಯಾಲಯ ಕಟ್ಟಡ ಕಾಮಗಾರಿಗೆ, 10 ಕೋಟಿ ರೂ ವೆಚ್ಚದಲ್ಲಿ ಅಕ್ಕ ಮಹಾದೇವಿ ಮಹಿಳಾ ಸ್ನಾತಕೋತ್ತರ ಕೇಂದ್ರದ ವಸತಿ ನಿಲಯಕ್ಕೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.
ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗು ಇತರ ಗಣ್ಯರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್