ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕಲಬುರಗಿ ಜನತೆ
ಕಲಬುರಗಿ, 28 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ನದಿಗೆ ಬಿಡುಗಡೆಗೊಂಡ ಅಪಾರ ನೀರಿನ ಪರಿಣಾಮ, ಕಲಬುರಗಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಉಲ್ಬಣಿಸಿದೆ. ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮ, ಕಾಗಿಣಾ ನದಿ ಪಾತ್ರಗಳ
Flood


ಕಲಬುರಗಿ, 28 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ನದಿಗೆ ಬಿಡುಗಡೆಗೊಂಡ ಅಪಾರ ನೀರಿನ ಪರಿಣಾಮ, ಕಲಬುರಗಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಉಲ್ಬಣಿಸಿದೆ. ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮ, ಕಾಗಿಣಾ ನದಿ ಪಾತ್ರಗಳು ಸಂಪೂರ್ಣ ಜಲಾವೃತವಾಗಿದ್ದು, ಗ್ರಾಮಸ್ಥರು ಮನೆಯ ಮೇಲ್ಛಾವಣಿ ಮೇಲೆ ಆಶ್ರಯ ಪಡೆದಿದ್ದಾರೆ.

ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿ ಹೊಸ ಸೇತುವೆ ಮುಳುಗಡೆಗೊಳ್ಳಿದ್ದು, ಬೀದರ್ – ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಸಂಚಾರ ಸ್ಥಗಿತಗೊಂಡಿದೆ. ಚಿಮ್ಮನಳ್ಳಿ ಬ್ರಿಡ್ಜ್ ಮತ್ತು ಅದರ ಪಕ್ಕದ ಜಮೀನುಗಳು ಜಲಾವೃತವಾಗಿದ್ದು, ಬ್ರೀಡ್ಜ್ ಕಂ ಬ್ಯಾರೇಜ್‌ಗೆ ಭಾರೀ ನಷ್ಟ ಸಂಭವಿಸಿದೆ. ಅಫಜಲಪುರ, ಜೇವರ್ಗಿ, ಚಿತ್ತಾಪುರ ಮತ್ತು ಸೇಡಂ ತಾಲ್ಲೂಕುಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಿಂಚೋಳಿ ತಾಲ್ಲೂಕಿನ ಜೆಟ್ಟೂರ್ ಗ್ರಾಮದಲ್ಲಿ ಹಳ್ಳದ ನೀರು ಕೊಟ್ಟಿಗೆ ನುಗ್ಗಿ 40 ಎತ್ತುಗಳು ಸಾವನ್ನಪ್ಪಿವೆ. ತಡರಾತ್ರಿ ಸಂಭವಿಸಿದ ಈ ದುರಂತದಲ್ಲಿ ಎತ್ತುಗಳು ಹೊರಗೆ ಹೋಗಲು ಸಾಧ್ಯವಾಗದೇ ಪ್ರಾಣ ಬಿಟ್ಟಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande