ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ
ರಾಯಚೂರು, 28 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗ್ರಾಮೀಣ ಭಾಗದಲ್ಲಿ ವಸತಿ ಶಾಲೆಗಳನ್ನು ನಿರ್ಮಿಸುವ ಮಕ್ಕಳ‌ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶಿಕ್ಷಣಕ್ಕೆ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದೇವೆ. ಖಾಲಿಯಿರುವ 5200 ಶಾಲಾ ಶಿಕ್ಷ
ಕಲ್ಯಾಣ ಕರ್ನಾಟಕ


ಕಲ್ಯಾಣ ಕರ್ನಾಟಕ


ರಾಯಚೂರು, 28 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗ್ರಾಮೀಣ ಭಾಗದಲ್ಲಿ ವಸತಿ ಶಾಲೆಗಳನ್ನು ನಿರ್ಮಿಸುವ ಮಕ್ಕಳ‌ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶಿಕ್ಷಣಕ್ಕೆ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದೇವೆ. ಖಾಲಿಯಿರುವ 5200 ಶಾಲಾ ಶಿಕ್ಷಕರನ್ನು ಎರಡು ತಿಂಗಳೋಳಗಾಗಿ ನೇಮಕಾತಿ ಮಾಡಲಾಗುವುದು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು.

ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದಲ್ಲಿ‌ 22 ಕೋಟಿ ವೆಚ್ಚದ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆ, ಮೆಟ್ರಿಕ್ ಮತರ ವಸತಿ‌ ನಿಲಯ ಕಟ್ಟಡಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಸಚಿವ ಎನ್ ಎಸ್ ಬೋಸರಾಜು, ಹಾಗೂ ಶಾಸಕ‌ ಹಂಪಯ್ಯ ನಾಯಕ ಅವರು ಜಂಟಿಯಾಗಿ ಶಂಕುಸ್ಥಾಪನೆ ನೆರವೇರಿಸಿದರು.

ಸದರಿ ವಸತಿ ಶಾಲೆಯ ಕಟ್ಟಡವನ್ನು ತ್ವರಿತ ಗತಿಯಲ್ಲಿ ಗುಣಮಟ್ಟದೊಂದಿಗೆ ಕಾಮಗಾರಿ ನಿರ್ವಹಿಸುವ ಮೂಲಕ ಒಂದು ವರ್ಷದ ಒಳಗಾಗಿ ಶಾಲೆಯನ್ನು ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಮ್ಮ ಸರ್ಕಾರ ಮಾಡುತ್ತಿರುವ ಜನಗಣತಿ ಜನರ ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿ ಹಾಗೂ ವಾಸ್ತವಿಕತೆಯನ್ನು ವರಧದಿಯಾಗಿದೆ ಎಂದರು..

ಕಡಿಮೆ ಭೂ ಪ್ರದೇಶ ಹೊಂದಿರುವ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕಾಗಿ ಸ್ಥಳೀಯರು ಜಾಗವನ್ನು ನೀಡಿದರೆ ಆಯಾ ಪ್ರದೇಶಕ್ಕೆ‌ ಅನುಗುಣವಾಗಿ ಕೊಠಡಿಗಳ ನಿರ್ಮಾಣಕ್ಕೆ ಕ್ರಮ‌ ಕೈಗೊಳ್ಳುತ್ತೇವೆ. ನೀವು ಸುಮಾರು 50 ವರ್ಷದಿಂದ ನಮ್ಮ ಮೇಲೆ ವಿಶ್ವಾಸವಿಟ್ಟು ಆಶೀರ್ವಾದ ಮಾಡುತ್ತಾ ಬಂದಿದ್ಧೀರಿ ಅದಕ್ಕಾಗಿ ನಮ್ಮ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು‌ ಮೀಸಲಿಡಲಾಗುತ್ತಿದೆ.

ನಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಮಾತನಾಡಿ, ಜನಪರ 5 ಗ್ಯಾರಂಟಿಗಳೊಂದಿಗೆ ನಮ್ಮ ಸರ್ಕಾರದ ಆಡಳಿತಾವಧಿಯಲ್ಲಿ ಸಂವಿಧಾನಾತ್ಮಕವಾಗಿ 371 ಜೆ ಶಾಶ್ವತ ಗ್ಯಾರಂಟಿ ಯೋಜನೆಯನ್ನು ನೀಡಿದ್ದೇವೆ. ಅತಿಯಾದ ಮಳೆಯಿಂದ ನಷ್ಟವಾದ ಬೆಳೆಗಳ ಬಗ್ಗೆ ಜಿಲ್ಲಾಡಳಿತಕ್ಕೆ ಸರ್ವೆ ಮಾಡಲು ಸೂಚಿಸಲಾಗಿದೆ.

371 ಜೆ ಮೂಲಕ ವಿಶೇಷ ಸ್ಥಾನಮಾನದ ಜೊತೆಗೆ ಕಲ್ಯಾಣ ಕರ್ನಾಟಕ‌ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನಿಸುತ್ತಿದ್ದೇವೆ ಎಂದರು.

ನಂತರ ಶಾಸಕರಾದ ಹಂಪಯ್ಯ ನಾಯಕ ಮಾತನಾಡಿ, ಜನಪರ ಅಭಿವೃದ್ದಿ ಕಾರ್ಯಗಳೊಂದಿಗೆ ನಾವು ನೀಡಿದ 5 ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ. ಮಕ್ಕಳ ಶಿಕ್ಷಣಕ್ಕೆ‌ ಹೆಚ್ಚಿನ ಅದ್ಯತೆ ನೀಡಲು ಗ್ರಾಮೀಣ ಭಾಗದಲ್ಲಿ ವಸತಿ ಶಾಲೆಗಳನ್ನು, ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕಂದೂ, ಗ್ಯಾರಂಟಿ ಯೋಜನೆಗಳ ತಾಲೂಕ ಅದ್ಯಕ್ಷರಾದ ಬಿಕೆ ಅಮರೇಶಪ್ಪ, ಕೆ‌ ಶಾಂತಪ್ಪ, ಜಿ ಶಿವಮೂರ್ತಿ, ಕಾಂಗ್ರೆಸ್ ಮುಖಂಡರಾದ ಶರಣಯ್ಯ ನಾಯಕ ಗುಡದಿನ್ನಿ, ಬ್ಲಾಕ್ ಅದ್ಯಕ್ಷರಾದ ಅಬ್ದುಲ್ ಗಫೂರ್ ಸಾಬ್, ಬಸನಗೌಡ ಮಾಲಿ ಪಾಟಿಲ್, ಅಮರೇಗೌಡ ಹಂಚಿನಾಳ, ಡಾ. ಶರ್ಮಾ, ಬಾಲಸ್ವಾಮಿ‌ ಕೊಡ್ಲಿ, ರುದ್ರಪ್ಪ ಅಂಗಡಿ, ದೇವೆಂದ್ರಪ್ಪ, ಖಾಲೀದ್ ಸಾಹೆಬ್, ರೌಡೂರು ಮಹಾಂತೇಶ ಸ್ವಾಮಿ, ಸುಭಾಸ್ ನಾಯಕ, ಖಾಲೀದ್ ಗುರು, ದೊಡ್ಡ ಬಸ್ಸಪ್ಪ ಗೌಡ, ಚಂದ್ರಶೇಖರ್ ಸೇರಿದಂತೆ ಅನೇಕರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande