ತುಮಕೂರು, 28 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತುಮಕೂರು ಜಿಲ್ಲಾ ಕ್ರೀಡಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ತುಮಕೂರು ಕ್ರೀಡಾ ದಸರಾ ಮಹೋತ್ಸವಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಚಾಲನೆ ನೀಡಿ,
ಕಬ್ಬಡ್ಡಿ, ನಾಡಕುಸ್ತಿ, ಜಿಮ್ನಾಸ್ಟಿಕ್ ಸೇರಿದಂತೆ ಸ್ಪರ್ಧೆಗಳಲ್ಲಿ ಭಾಗವಹಿಸಿದ ಯುವಕರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ರಾಷ್ಟ್ರೀಯ ಕಬ್ಬಡ್ಡಿ ಕ್ರೀಡಾಪಟು, ಅರ್ಜುನ್ ಪ್ರಶಸ್ತಿ ವಿಜೇತ ಬಿ.ಸಿ.ಸುರೇಶ್, ರಾಷ್ಟ್ರೀಯ ಕ್ರೀಡಾಪಟು ಸಹನಾ ಕುಮಾರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ ಮುಂತಾದವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa