ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರು ಸೋಮವಾರ ನಡೆಸುತ್ತಿದ್ದ ಜನತಾ ದರ್ಶನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಪಿಎಂಸಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ತೀವ್ರ ಹೃದಯಾಘಾತದಿಂದ ಸೋಮವಾರ ಮೃತಪಟ್ಟಿದ್ದಾರೆ.
ಮೃತರು ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆಯ ಎಎಸ್ಐ ಶ್ರೀನಿವಾಸ ರಾವ್ (52). ಇವರು ಸೋಮವಾರ ಬೆಳಗ್ಗೆ ಯಿಂದ ಜನತಾ ದರ್ಶನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಕರ್ತವ್ಯದ ಸಂದರ್ಭದಲ್ಲಿ ಏಕಾಏಕಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಾಗ, ಸಹದ್ಯೋಗಿಗಳು ಮತ್ತು ಸಾರ್ವಜನೊಕರು ತಕ್ಷಣವೇ ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲ ನೀಡದೇ ಶ್ರೀನಿವಾಸ ರಾವ್ ಅವರು ಸಂಜೆ ವೇಳೆಗೆ ನಿಧನರಾಗಿದ್ದಾರೆ. ಪೋಸ್ಟ್ ಮಾಟ್9ಂ ನಂತರ, ಪಾರ್ಥಿವ ಶರೀರವನ್ನು ಕುಟುಂಬಕ್ಕೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಅವರು ಆಸ್ಪತ್ರೆಗೆ ತಕ್ಷಣವೇ ಭೇಟಿ ನೀಡಿ, ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರು ಮೃತ ಶ್ರೀನಿವಾಸ ರಾವ್ ಅವರ ಮನೆಗೆ ಸಂಜೆ ಭೇಟಿ ನೀಡಿ, ಮೃತರ ಆತ್ಮಕ್ಕೆ ಶಾಂತಿಕೋರಿದ್ದಾರೆ. ಅಲ್ಲದೇ, ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು - ಪೊಲೀಸ್ ಇಲಾಖೆಯ ಅಧಿಕಾರಿಗಳು - ಸಿಬ್ಬಂದಿಗಳು ಹಾಜರಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್