ದೌರ್ಜನ್ಯ ನಿಯಂತ್ರಣ ಸಮಿತಿಗೆ ಸದಸ್ಯತ್ವಕ್ಕೆ ಅರ್ಜಿ ಅಹ್ವಾನ
ಹೊಸಪೇಟೆ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹೊಸಪೇಟೆ ಕಂದಾಯ ಉಪವಿಭಾಗ ಮಟ್ಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ 03 ವರ್ಷಗಳ ಅವಧಿಗೆ ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇ
ದೌರ್ಜನ್ಯ ನಿಯಂತ್ರಣ ಸಮಿತಿಗೆ ಸದಸ್ಯತ್ವಕ್ಕೆ ಅರ್ಜಿ ಅಹ್ವಾನ


ಹೊಸಪೇಟೆ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹೊಸಪೇಟೆ ಕಂದಾಯ ಉಪವಿಭಾಗ ಮಟ್ಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ 03 ವರ್ಷಗಳ ಅವಧಿಗೆ ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅನುಸೂಚಿತ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1989 ಹಾಗೂ ನಿಯಮ 1995 ತಿದ್ದುಪಡಿ ನಿಯಮಗಳು 2013 ರಂತೆ ನಿಯಮ 17ಎ ರ ಪ್ರಕಾರ ಉಸ್ತುವಾರಿ ಸಮಿತಿಗೆ ಇತರೆ ವರ್ಗದ ಇಬ್ಬರು ಎನ್.ಜಿ.ಓ ಅಧಿಕಾರೇತರ ಸದಸ್ಯರನ್ನು ಉಪವಿಭಾಗಾಧಿಕಾರಿಗಳು ನಾಮ ನಿರ್ದೇಶನ ಮಾಡಲಾಗುತ್ತದೆ. ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ದ್ವೀಪ್ರತಿಯನ್ನು ಆಕ್ಟೋಬರ್ 10 ರೊಳಗಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೇಳೆಯಲ್ಲಿ ಹೊಸಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande