ಏಷ್ಯಾಕಪ್ 2025:ಪಾಕ್ ವಿರುದ್ದ ಭಾರತಕ್ಕೆ ಐತಿಹಾಸಿಕ ಜಯ
ದುಬೈ, 29 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಭಾರತ–ಪಾಕಿಸ್ತಾನ ಪೈಪೋಟಿಯ ನಿರೀಕ್ಷಿತ ರೋಚಕ ಅಂತಿಮ ಪಂದ್ಯದಲ್ಲಿ ಭಾರತ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 147 ರನ್‌ಗಳ ಗುರಿಯನ್ನು ಟೀಮ್ ಇಂಡಿಯಾ 19
Cricket


ದುಬೈ, 29 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಭಾರತ–ಪಾಕಿಸ್ತಾನ ಪೈಪೋಟಿಯ ನಿರೀಕ್ಷಿತ ರೋಚಕ ಅಂತಿಮ ಪಂದ್ಯದಲ್ಲಿ ಭಾರತ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 147 ರನ್‌ಗಳ ಗುರಿಯನ್ನು ಟೀಮ್ ಇಂಡಿಯಾ 19.4 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ತಲುಪಿತು. ಈ ಮೂಲಕ 2025ರ ಏಷ್ಯಾಕಪ್ ಕಿರೀಟವನ್ನು ಭಾರತ ತನ್ನದಾಗಿಸಿಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಕುಲ್ದೀಪ್ ಯಾದವ್ ಅವರ ಮಾರಕ ಬೌಲಿಂಗ್ ಎದುರಿಸಲು ವಿಫಲವಾಯಿತು. ಪಾಕಿಸ್ತಾನ ಕೇವಲ 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಯಿತು.

ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲೇ ಆಘಾತ ಅನುಭವಿಸಿತು. ಉತ್ತಮ ಫಾರ್ಮ್‌ನಲ್ಲಿದ್ದ ಅಭಿಷೇಕ್ ಶರ್ಮಾ ಕೇವಲ 5 ರನ್‌ಗಳಿಸಿ ಪೆವಿಲಿಯನ್ ಸೇರಿದರು. ನಾಯಕ ಸೂರ್ಯಕುಮಾರ್ ಯಾದವ್ (1) ಹಾಗೂ ಶುಭ್‌ಮನ್ ಗಿಲ್ (12) ವೈಫಲ್ಯ ಕಂಡು ಭಾರತ 20 ರನ್‌ಗಳಲ್ಲೇ 3 ವಿಕೆಟ್ ಕಳೆದುಕೊಂಡು ಹಿನ್ನಡೆಯಲ್ಲಿತ್ತು.

ಆದರೆ ತಿಲಕ್ ವರ್ಮಾ ಹಾಗೂ ಸಂಜು ಸ್ಯಾಮ್ಸನ್ ನಾಲ್ಕನೇ ವಿಕೆಟ್‌ಗೆ 57 ರನಗಳ ಉತ್ತಮ ಆಟವಾಡಿದರು. ಸಂಜು 24 ರನ್‌ಗಳಿಸಿ ಔಟ್ ಆದರೂ, ಅಜೇಯವಾಗಿ ನಿಂತ ತಿಲಕ್ ವರ್ಮಾ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ದಡ ತಲುಪಿಸಿದರು.

ಪಂದ್ಯದ ಫಲಿತಾಂಶ:

ಪಾಕಿಸ್ತಾನ – 146 ಆಲೌಟ್ (19.1 ಓವರ್)

ಭಾರತ – 147/5 (19.4 ಓವರ್)

ಭಾರತ 5 ವಿಕೆಟ್‌ಗಳಿಂದ ಗೆದ್ದು ೯ನೇ ಬಾರಿ ಏಷ್ಯಾಕಪ್ ಕಿರೀಟ ತನ್ನದಾಗಿಸಿಕೊಂಡಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande