ಬೀದರ್, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬೀದರ್ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಪಿ. ಖಾಶೆಂಪುರ ಗ್ರಾಮದ ರೈತ ಮಹಿಳೆ ಗಂಗಮ್ಮ ಶಂಕರಾವ ಮಚ್ಚಕುರಿ ಅವರು ಇತ್ತಿಚೇಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆರ್ಥಿಕ ನೆರವು ನೀಡಿ, ಅನ್ನದಾತರ ಸಂಕಷ್ಟಗಳಿಗೆ ಬಿಜೆಪಿ ಸದಾ ಸ್ಪಂದಿಸುತ್ತದೆ ಎಂಬ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಭು ಚೌಹಾಣ್, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್, ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa