ಅ.02ರಂದು ಬಾಪೂಜಿ ಪ್ರಬಂಧ ಸ್ಪರ್ಧೆ
ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವದ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ಅ.02 ರಂದ
ಅ.02ರಂದು ಬಾಪೂಜಿ ಪ್ರಬಂಧ ಸ್ಪರ್ಧೆ


ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತ್ಯೋತ್ಸವದ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ಅ.02 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ವಿ.ತುಕಾರಾಂ ರಾವ್ ಅವರು ತಿಳಿಸಿದ್ದಾರೆ.

ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‍ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಬಳ್ಳಾರಿ ಆಕಾಶವಾಣಿ ಉದ್ಘೋಷಕರು ಹಾಗೂ ಉಪನ್ಯಾಸಕರಾದ ಅಮಾತಿ ಬಸವರಾಜ ಅವರು ಮಹಾತ್ಮ ಗಾಂಧೀಜಿಯವರ ಕುರಿತು ವಿಶೇಷ ಉಪನ್ಯಾಸ ನೀಡುವರು.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಸೇರಿದಂತೆ ಜಿಲ್ಲೆಯ ಎಲ್ಲಾ ಗೌರವಾನ್ವಿತ ಚುನಾಯಿತ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇತರರು ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande