ನಾಳೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದು ನಂ
Cm


ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ಪರಿಶೀಲನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದು ನಂತರ ಕಲಬುರಗಿಯಲ್ಲಿ ಅಧಿಕಾರಿಗಳ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲಿದ್ದಾರೆ.

ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande