ಮಕ್ಕಳ ಸಹಾಯವಾಣಿ ಸಂಖ್ಯೆ 1098 : ಸರ್ಕಾರಿ ಕಚೇರಿಗಳಲ್ಲಿ ಶಾಶ್ವತ ನಾಮಫಲಕ
ಹೊಸಪೇಟೆ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲಿನ ಶಾಶ್ವತ ಸೂಚನಾ ಫಲಕದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಯನ್ನು ಕಡ್ಡಾಯವಾಗಿ ನಮೂದಿಸುವಂತೆ ವಾರ್ತಾ ಮತ್ತು
ಮಕ್ಕಳ ಸಹಾಯವಾಣಿ ಸಂಖ್ಯೆ 1098 : ಸರ್ಕಾರಿ ಕಚೇರಿಗಳಲ್ಲಿ ಶಾಶ್ವತ ನಾಮಫಲಕ


ಹೊಸಪೇಟೆ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲಿನ ಶಾಶ್ವತ ಸೂಚನಾ ಫಲಕದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಯನ್ನು ಕಡ್ಡಾಯವಾಗಿ ನಮೂದಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್.ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ಮಕ್ಕಳ ಹಕ್ಕುಗಳ ರಕ್ಷಣೆ ತುರ್ತು ಅಗತ್ಯವಾಗಿದ್ದು. ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಹಾಗೂ ರಕ್ಷಣೆಯ ಅದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದ್ದು, ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ.

ಮಕ್ಕಳ ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೆ ಹಾಗೂ ಪುನರ್ವಸತಿ ಸೇವೆ ಒದಗಿಸುವಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಮಹತ್ವದ ಪಾತ್ರ ವಹಿಸುತ್ತದೆ ಅದ್ದರಿಂದ ಕಡ್ಡಾಯವಾಗಿ ಶಾಶ್ವತ ಸೂಚನಾ ಫಲಕದಲ್ಲಿ ಮಕ್ಕಳ ಸಹಾಯವಾಣಿಯನ್ನು ನಮೂದಿಸುವಂತೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande