ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕನ್ನಡ ರಂಗ ಭೂಮಿ ನಟ, ಹಾಸ್ಯ ಕಲಾವಿದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಿಸಿದೆ ಮೃತಪಟ್ಟಿದ್ದಾರೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 1965ರಲ್ಲಿ ಜನಿಸಿದ್ದ ಯಶವಂತ ಬಾಲ್ಯದಲ್ಲೇ ರಂಗಭೂಮಿ ಆಸಕ್ತಿ ಹೊಂದಿದ್ದರು.
ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮ ಪಡೆದು ನ್ಯೂಯಾರ್ಕ್ ವಿಶ್ವವಿದ್ಯಾಲಯದಿಂದ ನಾಟಕ ರಚನೆ, ಚಲನ ಚಿತ್ರ ಸಂಭಾಷಣೆಯ ವಿಶೇಷ ತರಬೇತಿ ಪಡೆದಿದ್ದರು.
ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ಅರವತ್ತಕ್ಕೂ ಹೆಚ್ಚು ನಾಟಕಗಳ ನಿರ್ದೇಶನ. ರಂಗವರ್ತುಲ, ಬೇಂದ್ರೆ ರಂಗಾವಳಿಯ ಮುಖಾಂತರ ಬೇಂದ್ರೆಯವರ ಎಲ್ಲ ನಾಟಕಗಳನ್ನು ಪ್ರದರ್ಶಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮಶಾಮಭಾಮ ಚಲನಚಿತ್ರಗಳಲ್ಲೂ ಅಭಿನಯಸಿ ಹೆಚ್ಚು ಜನಪ್ರಿಯರಾಗಿದ್ದ ಯಶವಂತ ಸರದೇಶಪಾಂಡೆ ಅಗಲಿಕೆ ರಂಗಭೂಮಿ ಹಾಗೂ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa