80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿರುವ ಕಾಂಗ್ರೆಸ್ ಸರಕಾರ : ಆರ್.ಅಶೋಕ
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ
Ashok


ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಿಜೆಪಿ 40% ಕಮಿಶನ್‌ ಪಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘದವರು, ಕಾಂಗ್ರೆಸ್‌ ಸರ್ಕಾರ ದುಪ್ಪಟ್ಟು ಕಮಿಶನ್‌ ಪಡೆಯುತ್ತಿದೆ ಎಂದು ಹೇಳಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಅಂದರೆ ಇದು 80 ಪರ್ಸೆಂಟ್‌ ಸರ್ಕಾರ ಎಂದು ತಿಳಿದುಬಂದಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಎಲ್ಲರೂ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ. ಇಲ್ಲವೆಂದರೆ ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ. ನ್ಯಾ.ನಾಗಮೋಹನದಾಸ್‌ ಸಮಿತಿಯನ್ನು ಸರ್ಕಾರ ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುವುದೆಂಬ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ಪೇ ಸಿಎಂ ಎಂಬ ಪೋಸ್ಟರ್‌ ಅಂಟಿಸಿದ್ದರು. ಇದಕ್ಕೆ ರಾಹುಲ್‌ ಗಾಂಧಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande