ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ 5 ಸಾವಿರ ತುರ್ತು ಪರಿಹಾರ ; ಸಚಿವ ಡಾ.ಎಂ.ಬಿ. ಪಾಟೀಲ
ವಿಜಯಪುರ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭೀಮಾ ನದಿಯ ಪ್ರವಾಹದಿಂದ ಅತಿವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ ೫ ಸಾವಿರ ರೂ. ತುರ್ತು ಪರಿಹಾರದ ಜೊತೆಗೆ ಇನ್ನೂ ಹೆಚ್ಚುವರಿಯಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ
ಪಾಟೀಲ


ವಿಜಯಪುರ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಭೀಮಾ ನದಿಯ ಪ್ರವಾಹದಿಂದ ಅತಿವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ ೫ ಸಾವಿರ ರೂ. ತುರ್ತು ಪರಿಹಾರದ ಜೊತೆಗೆ ಇನ್ನೂ ಹೆಚ್ಚುವರಿಯಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ‌ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಅವರು, ಪ್ರವಾಹ ಪರಿಸ್ಥಿತಿ ವೇಳೆ ತುರ್ತು ಪರಿಹಾರ ರೂಪವಾಗಿ ಐದು ಸಾವಿರ ರೂ. ನೀಡಲಾಗುತ್ತಿದೆ, ಇದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಪ್ರಥಮ ಹಂತದ ತುರ್ತು ಪರಿಹಾರವನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈಗಾಗಲೇ ಪ್ರವಾಹ ಸಂತ್ರಸ್ತರನ್ನು ಖುದ್ದು ಭೇಟಿ ಮಾಡಿ ಅವರ ಅಹವಾಲು ಆಲಿಸುವ ಕೆಲಸ ಮಾಡಿರುವೆ, ಅವರ ಜೊತೆ ಸರ್ಕಾರವಿದೆ, ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜನಕಅಭಯ ನೀಡಲಾಗಿದೆ ಎಂದರು.

ಇಂಡಿ ತಾಲೂಕಿನ ೦೮ ಗ್ರಾಮಗಳು ಮತ್ತು ಆಲಮೇಲ ತಾಲೂಕಿನ ೦೬ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಒಟ್ಟು ೧೭ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಿ, ೧೮೫ ಕುಟುಂಬಗಳನ್ನೊಳಗೊಂಡಂತೆ (ಇಂಡಿ ತಾಲೂಕಿನಲ್ಲಿ ೫೪೧ ಜನ, ಆಲಮೇಲ ತಾಲೂಕಿನಲ್ಲಿ ೩೧೯ ಜನರನ್ನು) ಒಟ್ಟು ೮೬೦ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿ, ವಸತಿ, ಉಪಹಾರ ಹಾಗೂ ಊಟದ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

ಗೃಹ ಉಪಯೋಗಿ ವಸ್ತುಗಳ ಹಾನಿಯಾದ ಮತ್ತು ಮಳೆ ನೀರು ನುಗ್ಗಿರುವ ಒಟ್ಟು ೨೭೦ ಮನೆಗಗಳಿಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಮಾರ್ಗಸೂಚಿ ಹಾಗೂ ಸರ್ಕಾರದ ಆದೇಶಗಳನ್ವಯ ೧೩.೫೦ ಲಕ್ಷ ರೂ. ಪರಿಹಾರ ವಿತರಿಸಲಾಗಿದ್ದು, ಕಳೆದ ಎಪ್ರಿಲ್‌ನಿಂದ ಇಲ್ಲಿಯವರೆಗೆ ಒಟ್ಟು ೧೭ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಡೆಸಲಾಗಿರುತ್ತದೆ ಎಂದು ವಿವರಿಸಿದರು.

ಭೀಮಾ ನದಿ ಪ್ರವಾಹ ಹಾಗೂ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆಗಳು ಹಾನಿಯಾಗಿವೆ, ಹೀಗಾಗಿ ಮುಖ್ಯಮಂತ್ರಿಗಳೇ ಖುದ್ದು ನಾಳೆ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ, ಈಪರಿಹಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಅವರ ಗಮನಕ್ಕೆ ತರಲಾಗುವುದು ಎಂದರು.

೬೮೧೫.೧೫ ಹೆಕ್ಟರ್ ಕೃಷಿ ಬೆಳೆಹಾನಿ ಮತ್ತು ೫೬೬.೭೧ ಹೆಕ್ಟರ್ ತೋಟಗಾರಿಕೆ ಬೆಳೆಹಾನಿ ಸೇರಿ ಒಟ್ಟು- ೭೩೮೧.೮೬ ಹೆಕ್ಟರ್ ಬೆಳೆ ಹಾನಿಯಾದ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸೆಪ್ಟೆಂಬರ್ ಮಾಹೆಯಲ್ಲಿ ಮಳೆಯಿಂದ ಅಂದಾಜು ಕೃಷಿ ಬೆಳೆ ಹಾನಿ ೧,೩೧,೪೯೦.೦೦ ಹೆಕ್ಟರ್ ಹಾಗೂ ತೋಟಗಾರಿಕೆ ಬೆಳೆ ಹಾನಿ ೬,೭೪೯.೦೦ ಹೆಕ್ಟರ್ ಸೇರಿ ಒಟ್ಟು ೧,೩೮,೨೩೯ ಹೇಕ್ಟರ್ ಬೆಳೆ ಹಾನಿಯ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದು, ಜಂಟಿ ಸಮೀಕ್ಷೆ ಪ್ರಗತಿಯಲ್ಲಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande