ಗದಗ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ , ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಸೆಪ್ಟೆಂಬರ್ 30 ರಂದು ಸಾಯಂಕಾಲ 6 ಗಂಟೆಗೆ ಬಾಗಲಕೋಟಿ ಜಿಲ್ಲೆಯ ಚಿಕ್ಕ ಸಂಗಮ ರಸ್ತೆ ಮೂಲಕ ರಾತ್ರಿ 9 ಗಂಟೆಗೆ ಗದುಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಅಕ್ಟೋಬರ್ 1 ರಂದು ಬೆಳಿಗ್ಗೆ 7.30 ಗಂಟೆಗೆ ನಗರದ ಜಗದಂಬಾ ದೇವಸ್ಥಾನ ಸರಾಫ್ ಬಜಾರದಲ್ಲಿ ಶ್ರೀ ಜಗದಂಬಾ ದೇವಸ್ಥಾನ ಶ್ರೀ ತುಳಜಾ ಭವಾನಿ ದೇವಸ್ಥಾನದ ಶ್ರೀ ದೇವಿ ಅಲಂಕಾರ ಹಾಗೂ ಮಹಾಮಂಗಳಾರುತಿ ಪೂಜಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025 ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ರಸ್ತೆ ಮೂಲಕ ಗದುಗಿನಿಂದ ಹೊರಟು ಸಂಜೆ 7 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / lalita MP