ಸಿಸಿ,ಓಸಿ ಇಲ್ಲದೆ ನಿರ್ಮಿಸಿದ ಕಟ್ಟಡಗಳಿಗೆ ವಿದ್ಯುತ್–ನೀರು ಸಂಪರ್ಕ : ಸಭೆ
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದಿನಾಂಕ: 17-12-2024ರ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಓಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ ಬಗ್ಗೆ ಮುಖ್ಯಮಂತ್ರಿ ನೇತೃತ್
Meeting


ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ದಿನಾಂಕ: 17-12-2024ರ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಓಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸುಪ್ರೀಂ ಕೋರ್ಟ್ ನ ಆದೇಶ ಭಾರತದ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತಿದ್ದೂ, ಎಲ್ಲ ರಾಜ್ಯಗಳೂ ಆದೇಶವನ್ನು ಅನುಷ್ಠಾನಗೊಳಿಸುತ್ತಿವೆಯೇ? ಪರಿಶೀಲಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆಸಲಾಗಿ, ನಿರ್ಮಾಣಗೊಂಡಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸಾಧ್ಯವಿಲ್ಲ.ಸರ್ಕಾರದ ನಿರ್ಧಾರದಿಂದ ಜನರಿಗೆ ಅನುಕೂಲವಾಗಬೇಕು ಎಂದರು.

ಸೂಕ್ತ ಅನುಮತಿಗಳಿಲ್ಲದೇ ಈಗಾಗಲೇ ಮನೆ ನಿರ್ಮಿಸಿ ವಾಸವಿದ್ದಾರೆ. ಅಂತಹವರಿಗೆ ಒಂದು ಬಾರಿಗೆ ಅನ್ವಯವಾಗುವಂತೆ ನಿಯಮಿತಗೊಳಿಸಲು ಕಾನೂನಿನಲ್ಲಿ ಅವಕಾಶವಿರುವ ಬಗ್ಗೆಯೂ ಚರ್ಚೆ ನಡೆಸಲಾಯಿತು.

ಸುಪ್ರೀಂಕೋರ್ಟ್ ಆದೇಶ ಅನುಷ್ಠಾನಗೊಳ್ಳುವ ಮುಂಚೆ ಸಲ್ಲಿಕೆಯಾಗಿರುವ ಮಾರ್ಚ್ 2025ರವರೆಗಿನ ಅರ್ಜಿಗಳನ್ನು ಪರಿಗಣಿಸಿ ಒಸಿ ಮತ್ತು ಸಿಸಿಯಿಂದ ವಿನಾಯ್ತಿಗೊಳಿಸಿ ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡುವ ಬಗ್ಗೆ ಕಾನೂನಿನ ಸಾಧ್ಯತೆಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಲು ಅಕ್ಟೋಬರ್ 8 ರಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಸಂಬಂಧಪಟ್ಟ ಇಲಾಖಾ ಸಚಿವರು, ಸರ್ಕಾರದ ಅಡ್ವೋಕೇಟ್ ಜನರಲ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande