ಬೀದರ್, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ನಿಯೋಗ ಬೀದರ್ ಜಿಲ್ಲೆಯ ಭಾಲ್ಕಿ ವಿಧಾನ ಸಭಾ ಕ್ಷೇತ್ರದ ನಿಟ್ಟೂರು ಹಾಗೂ ಔರಾದ್ ವಿಧಾನ ಸಭಾ ಕ್ಷೇತ್ರದ ಸವಳಿಸಂಗಮದಲ್ಲಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಬೇಳೆ ಹಾನಿ ಪರಿಶೀಲನೆ ನಡೆಸಿತು.
ನೆರೆಯ ತೀವ್ರತೆ ಇಮ್ಮಡಿಗೊಂಡಿದ್ದು ಸಾಲ-ಸೋಲ ಮಾಡಿ ಬೆಳೆದಿದ್ದ ಬೆಳೆ ಕೈ ಸೇರುವ ಮುನ್ನವೇ ಸಂಪೂರ್ಣ ನಾಶವಾಗಿ, ಈ ಭಾಗದ ರೈತರು ಸಂಕಷ್ಟದಲ್ಲಿದ್ದು, ತತಕ್ಷಣವೇ ರಾಜ್ಯ ಸರ್ಕಾರ ನೆರವಿಗೆ ಧಾವಿಸಿ ಸೂಕ್ತ ಪರಿಹಾರ ಘೋಷಿಸಬೇಕೆಂದು ವಿಜಯೇಂದ್ರ ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಕೇಂದ್ರ ಸಚಿವ ಭಗಂತ ಖೂಭಾ , ಮಾಜಿ ಸಚಿವರಾದ ಪ್ರಭು ಚೌಹಾಣ್, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಬಿಳಿದಲೇ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa