ನವದೆಹಲಿ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಲಡಾಖ್‌ನಲ್ಲಿ ಪೂರ್ಣ ರಾಜ್ಯ ಸ್ಥಾನಮಾನಕ್ಕಾಗಿ ನಡೆದ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ಮಾಜಿ ಸೈನಿಕ ತ್ಸೆವಾಂಗ್ ಥಾರ್ಚಿನ್ ಸೇರಿದಂತೆ ನಾಲ್ವರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತ್ಸೆವಾಂಗ್ ಥಾರ್ಚಿನ್ ಸಿಯಾಚಿನ್‌ನಲ್ಲಿ ಸೇವೆ ಸಲ್ಲಿಸಿದ್ದರು, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದರು. ಅವರು ಶಾಂತಿಯುತ ಪ್ರತಿಭಟನೆಯನ್ನು ಮುನ್ನಡೆಸುತ್ತಿದ್ದಾಗ ಗುಂಡಿನ ದಾಳಿಯಲ್ಲಿ ಬಲಿಯಾದುದು ನೋವಿನ ಸಂಗತಿ” ಎಂದು ರಮೇಶ್ ಎಕ್ಸ್‌ನಲ್ಲಿ ಬರೆದಿದ್ದಾರೆ.
ಸೆಪ್ಟೆಂಬರ್ 24 ರಂದು ಲೇಹ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ, ಬೆಂಕಿ ಹಚ್ಚುವಿಕೆ ಮತ್ತು ಪೊಲೀಸರೊಂದಿಗೆ ಘರ್ಷಣೆಯಿಂದ ನಾಲ್ವರು ಸಾವನ್ನಪ್ಪಿ, 80 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa