ರಾಯಚೂರು, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮದಡಿ ರಚಿತವಾದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ/ ಸಫಾಯಿ ಕರ್ಮಚಾರಿಗಳ ಸಭೆಯು ಅಕ್ಟೋಬರ್ 4ರಂದು ಮಧ್ಯಾಹ್ನ 12 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಜನಪ್ರತಿನಿಧಿಗಳು ಉಪಸ್ಥಿತರಿರುವರು. ಜೊತೆಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್