ಹೊಸಪೇಟೆ : ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ.
ಹೊಸಪೇಟೆ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಅ.2 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆ.10 ಗಂಟೆಗೆ ರಾಷ್ಟ್ರಪಿತ ಗಾಂಧೀಜಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರೀ ಜಯಂತಿಯನ್ನು ಆಚರಿಸಲಾಗುತ್ತದೆ. ಗಾ
ಹೊಸಪೇಟೆ : ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ.


ಹೊಸಪೇಟೆ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಅ.2 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆ.10 ಗಂಟೆಗೆ ರಾಷ್ಟ್ರಪಿತ ಗಾಂಧೀಜಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರೀ ಜಯಂತಿಯನ್ನು ಆಚರಿಸಲಾಗುತ್ತದೆ.

ಗಾಂಧಿ ಜಯಂತಿ ಅಂಗವಾಗಿ ಗಾಂಧಿ ವಿಚಾರಧಾರೆಗಳನ್ನು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗಾಂಧೀಜಿಯವರ ಬದುಕು ಮತ್ತು ಅವರು ನಡೆಸಿದ ಪ್ರಯೋಗಗಳ ಕುರಿತು ಅರಿವು ಮೂಡಿಸಲು ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು. ಜಿಲ್ಲಾ ಮಟ್ಟದ ವಿಭಾಗಗಳಲ್ಲಿ ಒಟ್ಟು 9 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪ್ರೌಢಶಾಲೆ, ಪದವಿಪೂರ್ವ ವಿಭಾಗ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರತಿ ವಿಭಾಗದಲ್ಲಿ ಮೂವರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ವಿಜೇತರಿಗೆ ನಗದು ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತದೆ.

ವಿಜೇತರ ವಿವರ : ಪ್ರೌಢಶಾಲಾ ವಿಭಾಗದಲ್ಲಿ ಕೂಡ್ಲಿಗಿ ತಾಲೂಕಿನ ಕಂದಗಲ್ಲು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಜೆ.ಗಂಗಮ್ಮ (ಪ್ರಥಮ), ಸರ್ಕಾರಿ ಪ್ರೌಢಶಾಲೆ ಟಿ.ಬಿ.ಡ್ಯಾಂ ವಿದ್ಯಾರ್ಥಿನಿ ಕೌಶಲ್ಯ (ದ್ವಿತೀಯ), ಹೊಸಪೇಟೆ ವಾಲ್ಮೀಕಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಅಮೃತ(ತೃತೀಯ) ಸ್ಥಾನ ಪಡೆದಿದ್ದಾರೆ.

ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಹೊಸಪೇಟೆ ವಿಜಯನಗರ ಕಾಲೇಜು ವಿದ್ಯಾರ್ಥಿನಿ ಕೆ.ಶ್ರೇಯಾಂಕ (ಪ್ರಥಮ), ಹೊಸಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ವಿ.ಸಂಗೀತಾ(ದ್ವಿತೀಯ), ಹೊಸಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಚ್.ಕೆ.ವೇದಪ್ರಿಯಾ (ತೃತೀಯ) ಸ್ಥಾನ ಪಡೆದಿದ್ದಾರೆ.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಹೊಸಪೇಟೆಯ ಶ್ರೀ ಶಂಕರ ಆನಂದ್ ಸಿಂಗ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಬಿ.ಕಲ್ಪನಾ (ಪ್ರಥಮ), ವಿಜಯನಗರ ಕಾಲೇಜಿನ ಎಂ.ಚೇತನ್ ಕುಮಾರ್, ಹಗರಿಬೊಮ್ಮನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯಲ್ಲಾಪುರದ ನೀಲಮ್ಮ (ತೃತೀಯ) ಸ್ಥಾನ ಪಡೆದ್ದಾರೆ. ವಿಜೇತರಿಗೆ ಪ್ರಥಮ 3 ಸಾವಿರ ರೂ, ದ್ವಿತೀಯ 2 ಸಾವಿರ ರೂ, ತೃತೀಯ ಸ್ಥಾನಕ್ಕೆ 1 ಸಾವಿರ ರೂಗಳ ನಗದು ಮತ್ತು ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ ಶಾಸಕರು, ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಬಿ.ಧನಂಜಯಪ್ಪ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande