ಆರೋಗ್ಯ ಇಲಾಖೆ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಕೊಪ್ಪಳ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾಭಿಯಾನ ದರ್ತಿ ಅಭಾ-ಜನ ದುರ್ಗಮ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆ ವ್ಯಾಪ್ತಿಯ ಮತ್ತು ದುರ್ಗಮ ಹಾಗೂ ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ
ಆರೋಗ್ಯ ಇಲಾಖೆ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ


ಕೊಪ್ಪಳ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾಭಿಯಾನ ದರ್ತಿ ಅಭಾ-ಜನ ದುರ್ಗಮ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆ ವ್ಯಾಪ್ತಿಯ ಮತ್ತು ದುರ್ಗಮ ಹಾಗೂ ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಯನ್ನು ನೀಡುವ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಹುದ್ದೆಗಳ ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಬಗ್ಗೆ ಆಕ್ಷೇಪಣೆಗಳನ್ನು ಆಹ್ವಾನಿಸಿದೆ.

ಪಟ್ಟಿಗಳನ್ನು ಕಚೇರಿಯ ಸೂಚನಾ ಫಲಕಕ್ಕೆ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಅಕ್ಟೋಬರ್ 3 ರೊಳಗೆ(ರಜಾ ದಿನಗಳನ್ನು ಹೊರತು ಪಡಿಸಿ) ಲಿಖಿತವಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಟಿ.ಬಿ. ವಿಭಾಗದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande