ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲೆ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಮತ್ತು ₹11.60 ಲಕ್ಷ ದಂಡವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ಪ್ರಜ್ವಲ್ ರೇವಣ್ಣ, ವಿಚಾರಣಾ ನ್ಯಾಯಾಲಯದ ತೀರ್ಪು ಅಸ್ಪಷ್ಟ ಸಾಕ್ಷ್ಯಾಧಾರಗಳ ಮೇಲೆ ತೀರ್ಮಾನಿಸಲಾಗಿದೆ ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ತನಿಖಾ ಲೋಪಗಳು, ವರದಿಗಳ ವಿರೋಧಾಭಿಪ್ರಾಯ ಮತ್ತು ರಾಜಕೀಯ ಒತ್ತಡ ಮುಂತಾದ ಅಂಶಗಳನ್ನು ಉದಾಹರಿಸಿದ್ದು, ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ
ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದಾರೆ.
ಅರ್ಜಿ ಕುರಿತು ಉಚ್ಚ ನ್ಯಾಯಾಲಯ ವಿಚಾರಣಾ ದಿನಾಂಕವನ್ನು ನಿಗದಿ ಪಡಿಸಿಲ್ಲ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa