ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಬೇಡ : ಸಚಿವ ಪಾಟೀಲಗೆ ಮನವಿ
ವಿಜಯಪುರ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪಿಪಿಪಿ ವೈದ್ಯಕೀಯ ಕಾಲೇಜು ಸ್ಥಾಪನೆ ಕೈ ನೀಡುವಂತೆ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 12 ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ. ಪಾಟೀಲರ
ವೈದ್ಯಕೀಯ


ವಿಜಯಪುರ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪಿಪಿಪಿ ವೈದ್ಯಕೀಯ ಕಾಲೇಜು ಸ್ಥಾಪನೆ ಕೈ ನೀಡುವಂತೆ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 12 ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ. ಪಾಟೀಲರು ಧರಣಿ ನಿರತರಿಂದ ಮನವಿ ಸ್ವೀಕರಿಸಿದರು.

ನಂತರ ಮಾತನಾಡಿದ ಅವರು, ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸುಸಜ್ಜಿತ ಜಾಗ ಇದೆ. ಅರ್ಧ ಖರ್ಚಿನಲ್ಲೇ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಾಡಬಹುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಅವರೊಂದಿಗೆ ಮಾತನಾಡುವೆ. ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದರು.

ವೀರಶೈವ ಮಹಾಸಭಾದ ಅಧ್ಯಕ್ಷ ವಿ.ಸಿ. ನಾಗಠಾಣ ಮಾತನಾಡಿ, ಜಿಲ್ಲೆಯಲ್ಲಿ ಸಮಸ್ಯೆಗಳು ಬಂದಾಗ ಒಗ್ಗಟ್ಟಾಗಿ ಹೋರಾಟ ಮಾಡೋಣ. ಜನಗಳ ಹಿತಾಸಕ್ತಿ ಕಾಪಾಡುವುದೇ

ಜನಪ್ರತಿನಿಧಿಗಳ ಕೆಲಸ, ಜನರ ಅವಶ್ಯಕತೆಗಳನ್ನು ಅರಿತು ಅವರು ಕಾರ್ಯ ನಿರ್ವಹಿಸಬೇಕು ಎಂದರು.

ಮುಖಂಡ ವೈ.ವೈ. ಹಿಪ್ಪರಗಿ ಧರಣಿಗೆ ಬೆಂಬಲ ವ್ಯಕ್ತಪಡಿಸಿದರು. ಹೋರಾಟ ಸಮಿತಿ ಸದಸ್ಯರಾದ ಅರವಿಂದ ಕುಲಕರ್ಣಿ, ಭಗವಾನ್ ರೆಡ್ಡಿ, ಅಪ್ಪಸಾಹೇಬ ಯರನಾಳ, ಅನಿಲ ಹೊಸಮನಿ, ಲಲಿತಾ ಬಿಜ್ಜರಗಿ, ಕೆ.ಎಫ್. ಅಂಕಲಗಿ, ವಿದ್ಯಾವತಿ ಅಂಕಲಗಿ, ಸುರೇಶ ಬಿಜಾಪುರ, ಸುರೇಶ್ ಜೀಬಿ, ಲಕ್ಷ್ಮಣ ಹಂದ್ರಾಳ, ಶ್ರೀನಾಥ ಪೂಜಾರಿ, ಮಲ್ಲಿಕಾರ್ಜುನ ಬಟಗಿ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ ಎಚ್.ಟಿ, ಫಯಾಜ್ ಕಲಾದಗಿ, ಅಬ್ದುಲ್ ರಹಮಾನ್ ನಾಸಿರ್, ಜ್ಯೋತಿ ಮಿಣಜಗಿ, ಸಿದ್ದರಾಮ ಹಳ್ಳೂರ, ಜಯದೇವ ಸೂರ್ಯವಂಶಿ, ಮಲ್ಲಿಕಾರ್ಜುನ ಎಚ್.ಟಿ, ಶಿವಬಾಳಮ್ಮ ಕೊಂಡಗೂಳಿ, ದಸ್ತಗಿರಿ ಉಕ್ಕಲಿ, ಕಸ್ತೂರಿ ದೊಡ್ಡಮನಿ, ಗಿರೀಶ ಕಲಘಟಗಿ, ಪೂಜಾ ಜೋಮಿವಾಲೆ, ಕಾಮಿನಿ ಕಸಬ, ಮೀನಾಕ್ಷಿ ಸಿಂಗೆ, ಲಕ್ಷ್ಮಣ ಕಂಬಾಗಿ, ಸಿದ್ದನಗೌಡ ಪಾಟಿಲ, ಬಾಬುರಾವ ಬೀರಕಬ್ಬಿ, ಅಕ್ರಂ ಮಾಶಳಕರ, ಸಂಗಮೇಶ ಸಗರ, ಸುನಂದಾ ರಾಥೋಡ, ಸಿದ್ರಾಮಯ್ಯ ಹಿರೇಮಠ ಮುಂತಾದವರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande