ಧಾರವಾಡ ಗುಲಗಂಜಿಕೊಪ್ಪ ಪ್ರದೇಶದಲ್ಲಿ ಸಮೀಕ್ಷೆಗೆ ತಾಂತ್ರಿಕ ಅಡಚಣೆ
ಧಾರವಾಡ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಸಬ್‍ಜೈಲ್ ಗುಲಗಂಜಿ ಕೊಪ್ಪ ಸುತ್ತಲಿನ ಪ್ರದೇಶಗಳಲ್ಲಿ ಸಮೀಕ್ಷೆಗೆ ತಾಂತ್ರಿಕ ಅಡಚಣೆ ಎದುರಾಗಿದೆ. ಸಬ್‍ಜೈಲ್‍ದಲ್ಲಿ ಜಾಮರ್ ಅಳವಡಿಸಿರುವುದರಿಂದ ಸಮೀಕ
Problem


ಧಾರವಾಡ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಸಬ್‍ಜೈಲ್ ಗುಲಗಂಜಿ ಕೊಪ್ಪ ಸುತ್ತಲಿನ ಪ್ರದೇಶಗಳಲ್ಲಿ ಸಮೀಕ್ಷೆಗೆ ತಾಂತ್ರಿಕ ಅಡಚಣೆ ಎದುರಾಗಿದೆ.

ಸಬ್‍ಜೈಲ್‍ದಲ್ಲಿ ಜಾಮರ್ ಅಳವಡಿಸಿರುವುದರಿಂದ ಸಮೀಕ್ಷೆದಾರರಿಗೆ ನೆಟವರ್ಕ್ ಸಮಸ್ಯೆಯಾಗಿ ಗುಲಗಂಜಿಕೊಪ್ಪ ಸಬ್‍ಜೈಲ್ ಹತ್ತಿರದ ಪ್ರದೇಶಗಳಲ್ಲಿ ಮನೆಮನೆ ಸಮೀಕ್ಷೆಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಭುವನೇಶ ಪಾಟೀಲ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ತಂಡ ಸಬ್‍ಜೈಲ್ ಪ್ರದೇಶಕ್ಕೆ ಭೇಟಿ ಪರಿಶೀಲಿಸಿತು.

ನೆಟವರ್ಕ ಸಮಸ್ಯೆ ಇರುವ ಪ್ರದೇಶಗಳ ಕುಟುಂಬಗಳಿಗೆ ಕುಮಾರೇಶ್ವರ ನಗರ ಹಾಗೂ ಕಮಲಾಪುರ ಭಾಗದಲ್ಲಿ ಕೇಂದ್ರ ಗುರುತಿಸಿ, ಅಭಿಯಾನದ ರೀತಿಯಲ್ಲಿ ಸಮೀಕ್ಷೆ ಮಾಡಲು ಕ್ರಮ ವಹಿಸುವಂತೆ ಸಿಇಒ ಭುವನೇಶ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಬಾನುಮತಿ ಎಚ್., ತಹಶೀಲ್ದಾರ್ ಡಾ. ಡಿ.ಎಚ್. ಹೂಗಾರ, ತಾಲೂಕು ಪಂಚಾಯತ ಇಓ ಗಂಗಾಧರ ಕಂದಕೂರ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ರಾಮಕೃಷ್ಣ ಸದಲಗಿ, ಮಹಾನಗರ ಪಾಲಿಕೆ ವಲಯ 12 ರ ಸಹಾಯಕ ಆಯುಕ್ತ ಶಂಕರ ಪಾಟೀಲ ಸೇರಿದಂತೆ ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande