ಧಾರವಾಡ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಶ್ವ ರೇಬಿಸ್ ದಿನಾಚರಣೆಯ ಪ್ರಯುಕ್ತ ಧಾರವಾಡ ಪಶು ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕ ಆರೋಗ್ಯಕ್ಕಾಗಿ ರೇಬಿಸ್ ನಿಯಂತ್ರಣ ಕುರಿತಾದ ತಾಂತ್ರಿಕ ಕಾರ್ಯಗಾರವನ್ನು ಜಿಲ್ಲಾ ಆರೋಗ್ಯಧಿಕಾರಿ ಡಾ.ಎಸ್.ಎಮ್. ಹೊನಕೇರಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೇಬಿಸ್ ರೋಗ ಒಂದು ಪ್ರಾಣಿಜನ್ಯ ರೋಗವಾಗಿದ್ದು, ಪ್ರಾಣಿ ಕಡಿತದ ನಂತರ ಲಸಿಕೆಯನ್ನು ಸರಿಯಾಗಿ ತೆಗೆದುಕೊಳ್ಳುವ ಮೂಲಕ ಮಾನವರು ರೇಬಿಸ್ ರೋಗವನ್ನು ಸಂಪೂರ್ಣವಾಗಿ ತಡೆಯಬಹುದು. ರೋಗ ನಿಯಂತ್ರಣ ಸಲುವಾಗಿ ಕಾರ್ಯ ಸಾಧಕ ಪರಿಹಾರ ಮಾರ್ಗಗಳನ್ನು ಹುಡುಕಲು ಕರೆ ನೀಡಿದರು.
ಕಾರ್ಯಗಾರದ ಅಧ್ಯಕ್ಷತೆ ವಹಿಸಿದ್ದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಎಸ್.ವಿ.ಸಂತಿ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಪಶುವೈದ್ಯರು ಸೆಪ್ಟೆಂಬರ ತಿಂಗಳಿನಲ್ಲಿ ಶಾಲಾ-ಕಾಲೇಜುಗಳಲ್ಲಿ ನಡೆಸಿದ ರೇಬೀಸ್ ಜಾಗೃತಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.
ರೋಗದ ನಿಯಂತ್ರಣಕ್ಕಾಗಿ ಒಂದು ತಿಂಗಳವರೆಗೆ ಎಲ್ಲ ಸರ್ಕಾರಿ ಪಶು ಚಿಕಿತ್ಸಾಲಯಗಳಲ್ಲಿ ಸಾಕು ಪ್ರಾಣಿಗಳಾದ ನಾಯಿ ಮತ್ತು ಬೆಕ್ಕುಗಳಿಗೆ ಉಚಿತವಾಗಿ ನಾಯಿ ಹುಚ್ಚು ರೋಗದ ವಿರುದ್ದ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು. ಮತ್ತು ರೇಬಿಸ್ ರೋಗ ತಡೆಗಟ್ಟುವ ಮಾಹಿತಿಯ ಭಿತ್ತಿ ಪತ್ರಗಳನ್ನು ಸಭೆಯಲ್ಲಿ ಬಿಡುಗಡೆಗೊಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa