ಚಿತ್ರದುರ್ಗ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಕೋಟೆಯ ಇತಿಹಾಸವನ್ನು ಸಾರುವಲ್ಲಿ ಪ್ರವಾಸಿ ಮಾರ್ಗದರ್ಶಿಗಳ ಪಾತ್ರ ಮುಖ್ಯವಾಗಿದುದ್ದು ಎಂದು ರಾಷ್ಟ್ರೀಯ ಹೆದ್ದಾರಿ-48ರ ತಹಶೀಲ್ದಾರ್ ನಾಗವೇಣಿ ಹೇಳಿದರು.
ನಗರದ ಕೆ.ಎಸ್.ಟಿ.ಡಿ.ಸಿ, ಮಯೂರ ದುರ್ಗ ಹೋಟೆಲ್‍ನಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾರ್ಗದರ್ಶಿಗಳು ಪ್ರವಾಸಿಗರಿಗೆ ಸೂಕ್ತ ಹಾಗೂ ಸರಿಯಾದ ಮಾಹಿತಿಯನ್ನು ನೀಡುವ ಮೂಲಕ ಚಿತ್ರದುರ್ಗ ಗತಿ ಇತಿಹಾಸವನ್ನು ಕಣ್ಣೆದುರು ತೆರೆದಿಡುವ ಕೆಲಸ ಮಾಡಬೇಕು. ಕೋಟೆ ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಲ್ಲಿ ಶುಚ್ಛಿತ್ವವನ್ನು ಕಾಪಾಡಿಕೊಳ್ಳಬೇಕು. ಪ್ರವಾಸಿಗರಿಗೆ ಮೂಲಭೂತ ಸೌಲಭ್ಯಗಳನ್ನು ನೀಡಬೇಕು. ಹೆಚ್ಚು ಹೆಚ್ಚು ಪ್ರವಾಸಿಗರು ಜಿಲ್ಲೆ ಆಗಮಿಸಿದಷ್ಟು ಜಿಲ್ಲೆ ಪ್ರಗತಿ ಕಾಣಲಿದೆ. ಹೆಚ್ಚು ಪ್ರಚಲಿತವಿಲ್ಲದ ಜಿಲ್ಲೆಯ ಪ್ರವಾಸಿ ತಾಣಗಳನ್ನು ಸಹ ಹೊರಜಗತ್ತಿಗೆ ಪರಿಚಯಿಸುವ ಕೆಲಸವಾಗಬೇಕು ಎಂದು ನಾಗವೇಣಿ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa