ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 7.80 ಕೋಟಿ ರೂ. ಮೌಲ್ಯದ ಡ್ರಗ್ಸ್‌ನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಗಳನ್ನು ಕೆವಿನ್ ರೋಜರ್ ಹಾಗೂ ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ.
ಬಂಧಿತರಿಂದ ಎಂಡಿಎಂಎ ಕ್ರಿಸ್ಟಲ್ 3.8 ಕೆಜಿ, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್, 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆಜಿ ಗಾಂಜಾ ಹಾಗೂ 482 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಇತ್ತೀಚೆಗೆ ಭಾರತಕ್ಕೆ ಬಂದಿದ್ದ ಈ ಇಬ್ಬರೂ ಬೆಂಗಳೂರಿನ ಹೆಬ್ಬಗೋಡಿಯಲ್ಲಿ ಮನೆ ಮಾಡಿ ಮಾಡಿಕೊಂಡು ವಾಸಿಸುತ್ತಿದ್ದರು.
ಆರೋಪಿಗಳು ದೆಹಲಿ ಮತ್ತು ಮುಂಬಯಿಂದ ಡ್ರಗ್ಸ್ ತರಿಸಿ ಟೆಕ್ಕಿಗಳು, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಅಪರಿಚಿತ ಸ್ಥಳಗಳಲ್ಲಿ ಡ್ರಗ್ಸ್ ಪಾರ್ಸೆಲ್ ಇಟ್ಟು ಲೋಕೇಷನ್ ಕಳುಹಿಸಿ ಆನಲೈನ್ ಮೂಲಕ ಹಣ ಪಡೆಯುತ್ತಿದ್ದರು ಎಂದು ಬೆಂಗಳೂರು ನಗರ ಪೋಲಿಸ ಆಯುಕ್ತ ಸೀಮಂತಕುಮಾರ ಸಿಂಗ್ ತಿಳಿಸಿದ್ದಾರೆ.
ಬಂಧಿತರ ವಿರುದ್ಧ ಬೆಂಗಳೂರು ಸಿಸಿಬಿ ಹಾಗೂ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa