ರಾಯಚೂರು, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 04ರ ಬೆಳಿಗ್ಗೆ 11 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.
ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್