ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನವೆಂಬರ್ 11, 2026 ಕ್ಕೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸದಸ್ಯರ ಪದಾವಧಿ ಮುಕ್ತಾಯಗೊಳ್ಳಲಿದ್ದು, ನವೆಂಬರ್ 01, 2025 ಕ್ಕೆ ಅನ್ವಯಿಸುವಂತೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ವೇಳಾಪಟ್ಟಿಯನ್ನು ಹೊರಡಿಸಿದ್ದು, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ದತೆ ಕುರಿತು ಚರ್ಚಿಸಲು ಸೆ.30 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಕಾರ್ಯಾಲಯದ ಕೆಸ್ವಾನ್ ಸಭಾಂಗಣದಲ್ಲಿ ಸಭೆ ಏರ್ಪಡಿಸಲಾಗಿದೆ.
ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸರ್ಕಾರಿ, ಖಾಸಗಿ ಅನುದಾನಿತ, ಖಾಸಗಿ ಅನುದಾನರಹಿತ ಶಾಲಾ/ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಗಳ ಮಾಹಿತಿಯೊಂದಿಗೆ ಹಾಜರಿಯಾಗಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್