ಗದಗ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಗದಗ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಗದಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾನೂನು ಸೇವೆಗಳ ಪಾಧಿಕಾರ ಇವರುಗಳ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2025 ಅಕ್ಟೋಬರ್ 1 ಬುದುವಾರ ಬೆಳಗ್ಗೆ 11:00 ಘಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರಗುವುದು.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ್ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಅಧ್ಯಕ್ಷತೆ ಹಾಗೂ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ9 ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ಅವರುಗಳು ಆಗಮಿಸುವರು.
ಸರ್ಕಾರದ ಕಾರ್ಯದರ್ಶಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಡಾ.ಶಮ್ಲಾ ಇಕ್ಬಾಲ್, ಕರ್ನಾಟಕ ಯೋಜನೆ ಕಾರ್ಯಕ್ರಮ ಸಂಯೋಜನೆ ಮತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ, ಹಿರಿಯ ದಿವಾಣಿ ನ್ಯಾಯಾದೀಶರು ಹಾಗೂ ಸದಸ್ಯ ಕಾರ್ಯದಶಿಗಲು ಜಿಲ್ಲಾ ಸೇವಾ ಪ್ರಾಧಿಕಾರ ಗದಗ ಇವರು ವಿಶೇಷ ಆಹ್ವಾನಿತರು
ಉಪನಿರ್ದೇಶಕರು ಮಹಿಳಾ ಮತ್ತು ಬಮಕ್ಕಳ ಅಭಿವೃದ್ಧಿ ಇಲಾಖೆಯ ಶ್ರೀಮತಿ ಪದ್ಮಾವತಿ ಗದಗ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ ಮಹಾಂತೇಶ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP