ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕ ದಿನಾಚರಣೆಯನ್ನು ಅ.09 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ತಿಳಿಸಿದ್ದಾರೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಶತಾಯುಶಿಗಳಿಗೆ ಸನ್ಮಾನ ಮತ್ತು ಕ್ರೀಡಾ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಿಸಲಾಗುವುದು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಸೇರಿದಂತೆ ಇತರರು ಉಪಸ್ಥಿತರಿರುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್