ಛತ್ತೀಸ್‌ಗಢದಲ್ಲಿ ಅಣೆಕಟ್ಟು ಒಡೆದು 4 ಜನರ ಸಾವು
ಬಲರಾಂಪುರ, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯ ವಿಷಮನಗರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದ್ದ ಸುಮಾರು 40 ವರ್ಷ ಹಳೆಯದಾದ ಲೂಟಿ ಅಣೆಕಟ್ಟು ತಡರಾತ್ರಿ ಒಡೆದುಹೋಗಿದ್ದು ಇದರಿಂದ ಕೆಳಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡು, ಗ್ರಾಮದಲ್ಲಿ ಭಾರೀ ನಷ್ಟ ಸಂಭವಿಸ
Dam damage


ಬಲರಾಂಪುರ, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯ ವಿಷಮನಗರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದ್ದ ಸುಮಾರು 40 ವರ್ಷ ಹಳೆಯದಾದ ಲೂಟಿ ಅಣೆಕಟ್ಟು ತಡರಾತ್ರಿ ಒಡೆದುಹೋಗಿದ್ದು ಇದರಿಂದ ಕೆಳಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡು, ಗ್ರಾಮದಲ್ಲಿ ಭಾರೀ ನಷ್ಟ ಸಂಭವಿಸಿದೆ.

ಘಟನೆಯಲ್ಲಿ ಒಂದೇ ಕುಟುಂಬದ ಆರು ಜನ ಸೇರಿ ಏಳು ಮಂದಿ ಕೊಚ್ಚಿ ಹೋಗಿದ್ದು, ಈಗಾಗಲೇ ನಾಲ್ವರ ಶವ ಪತ್ತೆಯಾಗಿದೆ. ಇನ್ನೂ ಮೂರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರಲ್ಲಿ ಬಟಸೈಯ್ಯ (62, ಮಹಿಳೆ), ಚಿಂತಾ (35, ಮಹಿಳೆ), ರಾಜಂತಿ (25, ಮಹಿಳೆ) ಹಾಗೂ ಒಂದು ಅಪ್ರಾಪ್ತ ಮಗು ಸೇರಿದ್ದಾರೆ. ತಡರಾತ್ರಿ ಎರಡು ಶವಗಳು ಪತ್ತೆಯಾಗಿದ್ದು, ಬುಧವಾರ ಬೆಳಿಗ್ಗೆ ಇನ್ನೂ ಎರಡು ಶವಗಳನ್ನು ಹೊರತೆಗೆಯಲಾಗಿದೆ.

ಸ್ಥಳೀಯರು ನೀಡಿದ ಮಾಹಿತಿಯ ಆಧಾರದ ಮೇಲೆ ಜಿಲ್ಲಾ ಪೊಲೀಸರು, ಆಡಳಿತ ಹಾಗೂ ಎನ್‌ಡಿಆರ್‌ಎಫ್ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಕೈಗೊಂಡಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande