ರಾಯಚೂರು, 03 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಅಕ್ಟೋಬರ್ 07ರಂದು ನಡೆಯುವ ವಾಲ್ಮೀಕಿ ಜಯಂತಿಯ0ದು ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಪರಿಶಿಷ್ಟ ವರ್ಗದವರ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ಆದೇಶದಲ್ಲಿರುವ ಮಾರ್ಗಸೂಚಿಯ ಅಂಶಗೊಳಪಟ್ಟು ಪರಿಶಿಷ್ಟ ವರ್ಗದವರ ಏಳೆಗೆಗಾಗಿ ಶ್ರಮಿಸಿದ ವ್ಯಕ್ತಿಗಳು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ರಾಯಚೂರು ಅಥವಾ ಆಯಾ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಪಡೆದು ತಮ್ಮ ಪೂರ್ಣ ವ್ಯಕ್ತಿ ಪರಿಚಯ, ಸಾಧನೆ ಹಾಗೂ 2 ಭಾವಚಿತ್ರಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಸೆಪ್ಟೆಂಬರ್ 12ರೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ರಾಯಚೂರು ಕಾರ್ಯಾಲಯ ಅಥವಾ ಆಯಾ ತಾಲೂಕಿನ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗಳಿಗೆ ಸಲ್ಲಿಸುವಂತೆ ಮಹರ್ಷಿ ವಾಲ್ಕೀಕಿ ಜಯಂತಿ ಆಚರಣಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಆಗಿರುವ ರಾಯಚೂರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್