ರಾಯಚೂರು, 03 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜಯಂತಿಯ ಅಂಗವಾಗಿ ಸೆಪ್ಟೆಂಬರ್ 10ರೊಳಗೆ ರಾಯಚೂರು ತಾಲೂಕಿನ ಪ್ರೌಢಶಾಲೆಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಬೇಕು ಎಂದು ರಾಯಚೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ.ಈರಣ್ಣ ಕೋಸಗಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ರಾಯಚೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಎಲ್ಲ ಪ್ರೌಢಶಾಲೆಗಳ ಮುಖ್ಯ ಗುರುಗಳಿಗೆ ಸುತ್ತೋಲೆ ಕಳುಹಿಸಿದ್ದು, ಅದರಂತೆ ಎಲ್ಲ ಶಾಲೆಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಿ ಆ ಎಲ್ಲ ಪ್ರಬಂಧಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಚೇರಿ ಹಿಂದುಗಡೆ, ರಾಯಚೂರು ಇಲ್ಲಿಗೆ ಸಲ್ಲಿಸಬೇಕು.
ಆಸ್ತಕ ಪ್ರೌಢಶಾಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಗಳಲ್ಲಿ ನಡೆಸುವ ಪ್ರಬಂಧ ಸ್ಪರ್ಧೆಯಲ್ಲಿ ಭಾಗಿಯಾಗಿ 1. ಸ್ವಚ್ಚತೆಯ ಪಾಠ - ಗಾಂಧೀಜಿಯವರ ಸಂದೇಶ., 2. ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ ಮತ್ತು 3. ಗಾಂಧೀಜಿಯವರ ಸ್ವಾತಂತ್ರ‍್ಯದ ಕನಸು - ನನ್ನ ಕಲ್ಪನೆ ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು. ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು., ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 3,000 ರೂ., ದ್ವಿತೀಯ ಸ್ಥಾನಕ್ಕೆ 2,000 ರೂ., ತೃತೀಯ ಸ್ಥಾನಕ್ಕೆ 1,000 ರೂ. ಬಹುಮಾನ ನೀಡಲಾಗುತ್ತದೆ. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರು ಮೌಲ್ಯಮಾಪನ ನಡೆಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ 31,000 ರೂ., ದ್ವಿತೀಯ ಸ್ಥಾನಕ್ಕೆ 21,000 ರೂ., ಹಾಗೂ ತೃತೀಯ ಸ್ಥಾನಕ್ಕೆ 11,000 ರೂ.ಗಳು ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್