ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆ ಇರುವ ಮಕ್ಕಳ ಆರೋಗ್ಯ ನಿಯಮಿತವಾಗಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೆರ್ ಅವರು ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆ ಮಕ್ಕಳ ಆರೋಗ್ಯ ತಪಾಸಣೆ ಕುರಿತು ವರ್ಚುವಲ್ ಮೂಲಕ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಮಕ್ಕಳ ಎತ್ತರ, ತೂಕ ಇದರ ಬಗ್ಗೆ ಪೋಷಣ್ ಟ್ರಾö್ಯಕ್ ಮೂಲಕ ಅನುಸರಣೆ ಮಾಡಬೇಕು. ತೀವ್ರತರ ಅಪೌಷ್ಟಿಕ ಮಕ್ಕಳು ಕಂಡು ಬ0ದಲ್ಲಿ ಸೂಕ್ತ ಚಿಕಿತ್ಸಾನುಸಾರ ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಇದರಿಂದ ಮಗುವಿನ ಮುಂದಿನ ಬೆಳವಣಿಗೆ ಆರೋಗ್ಯಕರವಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಎಲ್ಲಾ ವೈದ್ಯಾಧಿಕಾರಿಗಳು ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆ ಮಕ್ಕಳ ಆರೋಗ್ಯ ತಪಾಸಣೆ ಸರಿಯಾಗಿ ನಡೆಸುತ್ತಿದ್ದಾರೆಯೇ ಎಂದು ವಿಚಾರಿಸಿದ ಅವರು, ಈ ವಿಧದಲ್ಲಿ ತಾಲ್ಲೂಕು ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು ಎಂದರು.
ಅ0ಗನವಾಡಿ ಮಕ್ಕಳ ಆರೋಗ್ಯ ತಪಾಸಣೆಯನ್ನು ಆರೋಗ್ಯ ಮೇಳ ವಿಧದಲ್ಲಿ ಆಯೋಜಿಸಬೇಕು. ತಪಾಸಣೆ ಸಮಯದಲ್ಲಿ ಕ್ಷೇತ್ರಕ್ಕೆ ಸಂಬ0ಧಪಟ್ಟ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಖುದ್ದು ಹಾಜರಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.
ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ನಡೆಯುವ ಮುನ್ನ ದಾಖಲಾದ ಎಲ್ಲಾ ಮಕ್ಕಳ ಹಾಜರಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ನಂತರ ಆರೋಗ್ಯ ತಪಾಸಣೆ ನಂತರ ನಿಗಧಿತ ಸಮಯದಲ್ಲಿ ವರದಿ ನೀಡಬೇಕು ಎಂದು ಹೇಳಿದರು.
ಬಳಿಕ ಜಿಲ್ಲೆಯಲ್ಲಿನ ಗರ್ಭಿಣಿ ತಾಯಂದಿರ ಬಗ್ಗೆ ಚರ್ಚಿಸುತ್ತಾ ರಕ್ತಹೀನತೆ, ಅಧಿಕ ರಕ್ತದೊತ್ತಡ ನಿರ್ವಹಣೆಯ ಕುರಿತು ಕಾಳಜಿವಹಿಸಿ ಪ್ರತಿಯೊಬ್ಬ ಗರ್ಭಿಣಿಯರ ತಾಯಿ ಕಾರ್ಡ್ ಪರಿಶೀಲಿಸಬೇಕು. ಗರ್ಭಿಣಿ ತಾಯಂದಿರು ಕಬ್ಬಿಣಾಂಶ ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ ಎನ್ನುವುದರ ಬಗ್ಗೆ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು ಗಮನಿಸಬೇಕು ಎಂದು ಸೂಚಿಸಿದರು.
ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳು ಹಿಮೊಗ್ಲೋಬಿನ್ ಪರೀಕ್ಷೆ ಕೈಗೊಳ್ಳಬೇಕು. ಈ ಕುರಿತು ತಾಯಿಕಾರ್ಡ್ನಲ್ಲಿ ನಮೂದಿಸಬೇಕು. ನಂತರ ಅಧಿಕ ರಕ್ತದೊತ್ತಡ ನಿಯಮಿತವಾಗಿ ತಪಾಸಣೆ ಮಾಡುತ್ತಿರಬೇಕು. ಇವರೆಡರಿಂದಲೇ ತಾಯಿ ಮರಣ ಸಂಭವಿಸಲು ಕಾರಣವಾಗಬಹುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಎಲ್ಲಾ ತಾಲ್ಲೂಕ ನೋಡಲ್ ಅಧಿಕಾರಿಗಳು ಎಲ್ಲಾ ವೈದ್ಯಾಧಿಕಾರಿಗಳಿಗೆ ಸಭೆ ನಡೆಸಿ ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆ ಮಕ್ಕಳ ವರದಿ ನೀಡಲು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್