ಕುರುಗೋಡು : ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಭೇಟಿ
ಕುರುಗೋಡು, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕುರುಗೋಡು ತಾಲ್ಲೂಕಿನ ಕೋಳೂರು ಮತ್ತು ಸಿಂಧಿಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ವಿವಿಧ ಅಭಿವೃದ್ಧಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ
ಕುರುಗೋಡು: ವಿವಿಧೆಡೆ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಭೇಟಿ


ಕುರುಗೋಡು: ವಿವಿಧೆಡೆ ಜಿಪಂ ಸಿಇಒ ಮಹಮ್ಮದ್ ಹ್ಯಾರೀಸ್ ಸುಮೈರ್ ಭೇಟಿ


ಕುರುಗೋಡು, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕುರುಗೋಡು ತಾಲ್ಲೂಕಿನ ಕೋಳೂರು ಮತ್ತು ಸಿಂಧಿಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ವಿವಿಧ ಅಭಿವೃದ್ಧಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಅಲ್ಲಿನ ಶಾಲಾ ಮಕ್ಕಳ ಜೊತೆ ಸಂವಾದ ನಡೆಸಿದರು. ಬಳಿಕ ಸಿಂಧಿಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಪಂಚಾಯತ್ ರಾಜ್ ಇಂಜಿನಿಯರಿAಗ್ ಇಲಾಖೆಯ ರಸ್ತೆ ಕಾಮಗಾರಿಯನ್ನು ಪರಿಶೀಲನೆ ಮಾಡಿದರು.

ಕಾಮಗಾರಿಗಳಲ್ಲಿ ಗುಣಮಟ್ಟತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕರುಗೋಡು ತಾಪಂ ಇಒ ನಿರ್ಮಲ, ಪಂಚಾಯತ್ ರಾಜ್ ಇಂಜಿನಿಯರಿ0ಗ್ ಇಲಾಖೆಯ ಅಧಿಕಾರಿಗಳು, ಪಿಡಿಒ ಹಾಗೂ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande