ಕಾಲ್ತುಳಿತಕ್ಕೆ ಪ್ರಕರಣ : ವಿರಾಟ್ ಕೊಹ್ಲಿ ಭಾವುಕ ಸಂದೇಶ
ಬೆಂಗಳೂರು, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಪಂದ್ಯದಲ್ಲಿ ಜಯಗಳಿಸಿದ ನಂತರ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ದು
Virat


ಬೆಂಗಳೂರು, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಪಂದ್ಯದಲ್ಲಿ ಜಯಗಳಿಸಿದ ನಂತರ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಈ ದುರ್ಘಟನೆ ರಾಷ್ಟ್ರವ್ಯಾಪಿ ಪ್ರತಿಧ್ವನಿಸಿತ್ತು, ಇದೀಗ ಘಟನೆಯಾಗಿ 3 ತಿಂಗಳ ಬಳಿಕ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ.

ಆರ್​ಸಿಬಿ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಸಂದೇಶ ಹೀಗಿದೆ. ಜೂನ್ 4ರಂತಹ ಘಟನೆ ಜೀವನದಲ್ಲಿ ಯಾವುದೂ ಸಿದ್ಧಪಡಿಸದು. ಅದು ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲೇ ಅತ್ಯಂತ ಸಂತೋಷದಾಯಕ ಕ್ಷಣವಾಗಬೇಕಾಗಿತ್ತು, ಆದರೆ ದುರಂತವಾಗಿ ಮಾರ್ಪಟ್ಟಿತು.

ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ಅಭಿಮಾನಿಗಳಿಗಾಗಿ ನಾನು ಯೋಚಿಸುತ್ತಿದ್ದೇನೆ, ಪ್ರಾರ್ಥಿಸುತ್ತಿದ್ದೇನೆ. ಅವರ ನಷ್ಟ ಈಗ ನಮ್ಮ ಕಥೆಯ ಭಾಗವಾಗಿದೆ.

ಮುಂದೆ ನಾವು ಎಚ್ಚರಿಕೆಯಿಂದ, ಗೌರವದಿಂದ ಮತ್ತು ಜವಾಬ್ದಾರಿಯಿಂದ ಸಾಗುತ್ತೇವೆ. ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಅಲ್ಲದೆ ರಾಜ್ಯ ಸರ್ಕಾರವೂ ನಗರದ ಪೊಲೀಸ್ ಆಯುಕ್ತ ಬಿ. ದಯಾನಂದ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande