ಸೆಪ್ಟೆಂಬರ್ 8 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ ೮ ರಂದು ಬೆಳಿಗ್ಗೆ ೯ ಗಂಟೆಗೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗಿದೆ. ಅಬಕಾರಿ
ಸೆಪ್ಟೆಂಬರ್ 8 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ


ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ ೮ ರಂದು ಬೆಳಿಗ್ಗೆ ೯ ಗಂಟೆಗೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳಲಾಗಿದೆ.

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.

ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಲ್ಲದೇ ಇತರೆ ಗಣ್ಯಮಾನ್ಯರು ಭಾಗವಹಿಸಲಿದ್ದಾರೆ.

ತಾಲೂಕಾ ಮಟ್ಟದಲ್ಲಿ ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಅಲ್ಲದೇ ನೇರವಾಗಿ ಜಿಲ್ಲಾ ಮಟ್ಟದಲ್ಲಿ ಬಾಸ್ಕೇಟ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಟೆನ್ನಿಸ್, ನೆಟ್‌ಬಾಲ್, ಈಜು ಸ್ಪರ್ಧೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಲಾಗುತ್ತದೆ. ಭಾಗವಹಿಸುವ ಕ್ರೀಡಾಪಟುಗಳು ಆಧಾರ ಕಾರ್ಡ, ವ್ಯಾಸಂಗ ಪ್ರಮಾಣಪತ್ರ ಹಾಗೂ ಆನ್‌ಲೈನ್ ನೋಂದಣಿ ಪ್ರತಿಯನ್ನು ಸಲ್ಲಿಸುವಂತೆ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊನಂ.೯೭೩೯೭೨೨೭೦೦, ೯೯೪೫೨೮೪೭೭೧, ೯೪೪೯೯೫೯೦೬೪ & ೮೭೯೨೫೦೭೨೧೨ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande