ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ
ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯ
ಭಾರತೀಯ ಸೇನೆ, ಯೂನಿಫಾರ್ಮ ಸೇವೆಗಳಿಗೆ ಉಚಿತ ತರಬೇತಿ


ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗೆ 3ನೇ ಬ್ಯಾಚ್ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳು (ಬಾಲಕರಿಗೆ ಮಾತ್ರ) ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆ : ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1ರ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ರ ರೂ.1 ಲಕ್ಷ ಇರಬೇಕು.

ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತಿರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು.

ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಅಭ್ಯರ್ಥಿಯ ವಯೋಮಿತಿ 17 ರಿಂದ 20 ವರ್ಷದೊಳಗಿರಬೇಕು.

ಸೆಪ್ಟಂಬರ್-01 2025ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು.

ಅಭ್ಯರ್ಥಿಯು 01 ಸೆಪ್ಟಂಬರ್ 2005 ರಿಂದ 01 ಸೆಪ್ಟಂಬರ್ 2008 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

ತರಬೇತಿ ನೀಡುವ ಸ್ಥಳ :

ತರಬೇತಿಯನ್ನು ಕಲಬುರ್ಗಿ (ಕೇಂದ್ರ ಸ್ಥಳ) ಜಿಲ್ಲೆಯಲ್ಲಿ ನೀಡಲಾಗುವುದು. ಅಭ್ಯರ್ಥಿಗಳು ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಲಬುರ್ಗಿಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8105085410, 9148489157 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande