ಶಿಮ್ಲಾ, 3 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಿಮಾಚಲ ಪ್ರದೇಶದಲ್ಲಿ ನಿರಂತರ ಮಳೆಯಿಂದ ಭಾರಿ ಹಾನಿ ಸಂಭವಿಸಿದೆ. ಮಂಡಿ ಮತ್ತು ಕುಲ್ಲುವಿನಲ್ಲಿ ಭೂಕುಸಿತದಿಂದ 6 ಮಂದಿ ಸಾವನ್ನಪ್ಪಿ, ಇಬ್ಬರು ನಾಪತ್ತೆಯಾಗಿದ್ದಾರೆ.
ರಾಜ್ಯದಾದ್ಯಂತ 7 ರಾಷ್ಟ್ರೀಯ ಹೆದ್ದಾರಿ ಮತ್ತು 1,155 ರಸ್ತೆಗಳು ಬಂದ್ ಆಗಿದ್ದು, ವಿದ್ಯುತ್ ಮತ್ತು ಕುಡಿಯುವ ನೀರಿನ ಪೂರೈಕೆಯೂ ಅಸ್ತವ್ಯಸ್ತವಾಗಿದೆ. 2,477 ವಿದ್ಯುತ್ ಪರಿವರ್ತಕಗಳು, 720 ನೀರಿನ ಯೋಜನೆಗಳು ಸ್ಥಗಿತಗೊಂಡಿವೆ.
ಶಿಮ್ಲಾ ಹವಾಮಾನ ಕೇಂದ್ರವು ಸೋಲನ್, ಸಿರ್ಮೌರ್ ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಚಂಬಾದಲ್ಲಿ ರಾವಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವಾರು ಗ್ರಾಮಗಳನ್ನು ಮುನ್ನೆಚ್ಚರಿಕೆಯಿಂದ ತೆರವುಗೊಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa