ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿಯನ್ನು ಸಾಗಾಟ ಮಾಡುವಾಗ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿಯಾಗಿ ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಬೇವನೂರ ತಾಂಡಾ ಕ್ರಾಸ್ ಬಳಿ ನಡೆದಿದೆ.
ಸೊಲ್ಲಾಪುರ ನಿವಾಸಿಗಳಾದ ಫಿರೋಜ್ ನೂರೆವಾಲೆ, ಸಂಜೀವಕುಮಾರ ಟೆಂಗಳೆ ಬಂಧಿತ ಆರೋಪಿಗಳು. ಇನ್ನು ಆರೋಪಿಗಳಿಂದ ಟಂಟಂ ಗೂಡ್ಸ್, ನಾಲ್ಕು ಕೆಜಿ ಸ್ಯಾಂಪಲ್ ಅಕ್ಕಿ, 880 ಕೆಜಿ ಅಕ್ಕಿ ಸೇರಿದಂತೆ 60,636 ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂಡಿ ಗ್ರಾಮೀಣ ಠಾಣೆಯ ಪಿಎಸ್‌ಐ ಸೋಮೇಶ ಗೆಜ್ಜಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande