ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ
ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ ೫ ರಂದು ನವನಗರದ ಕಲಾಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಶಿಕ
ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ


ವಿಜಯಪುರ, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ ೫ ರಂದು ನವನಗರದ ಕಲಾಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ ೧೦.೩೦ಕ್ಕೆ ಜರಗುವ ಕಾರ್ಯಕ್ರಮವನ್ನು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಆರ್.ಬಿ.ತಿಮ್ಮಾಪೂರ ಉದ್ಘಾಟಿಸುವರು.

ಅಧ್ಯಕ್ಷತೆಯನ್ನು ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಹಾಗೂ ನವದೆಹಲಿ ಕರ್ನಾಟಕ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ, ಹುನಗುಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯ ಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಶಾಸಕರು ಹಾಗೂ ಇತರ ಗಣ್ಯಮಾನ್ಯರು ಆಗಮಿಸಲಿದ್ದಾರೆ. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾದ್ಯಾಪಕ ಜಿ.ಜಿ.ಹಿರೇಮಠ ಉಪನ್ಯಾಸ ನೀಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande