ಪರಿಹಾರ ಘೋಷಿಸದೆ ವೈಮಾನಿಕ ಸಮೀಕ್ಷೆ : ಆರ್‌.ಅಶೋಕ ಆಕ್ಷೇಪ
ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ
Ashok


ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಗಿರುವ ಪ್ರವಾಹದ ಸ್ಥಿತಿ ವೀಕ್ಷಿಸಲು ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡುತ್ತಿದ್ದಾರೆ. ಎಲ್ಲ ರಸ್ತೆಗಳಲ್ಲಿ ಗುಂಡಿ ಇರುವುದರಿಂದ ಹಾಗೂ ರಸ್ತೆ ತಡೆದು ಜನರು ಪ್ರತಿಭಟಿಸುವುದರಿಂದ ಭಯಗೊಂಡ ಮುಖ್ಯಮಂತ್ರಿ ಹೆಲಿಕಾಪ್ಟರ್‌ನಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ. ಜೋಳ ತೊಗರಿ ಸೇರಿದಂತೆ ಪ್ರತಿ ಬೆಳೆಗಳ ಹಾನಿ, ಮನೆ ಹಾನಿ, ಶಾಲೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೆ ಸರ್ಕಾರ ಆದೇಶ ಮಾಡಿಲ್ಲ. ಒಂದು ಕಡೆ ಖಜಾನೆ ಖಾಲಿಯಾಗಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲು ಸಿದ್ಧತೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿಗಳು ಸಚಿವರ ತಂಡ ರಚಿಸಬೇಕಿತ್ತು. ಅಧಿಕಾರಿಗಳ ಸಭೆ ಕರೆದು ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಬೇಕಿತ್ತು. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾಗಿ ಆಹಾರ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕಿತ್ತು. ಏನೂ ಮಾಡದೆಯೇ ಹೆಲಿಕಾಪ್ಟರ್‌ನಲ್ಲಿ ಸಮೀಕ್ಷೆ ಮಾಡಲಾಗುತ್ತಿದೆ. ಈ ಸರ್ಕಾರ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande